ಬೆಳಗಾವಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ; ಕನ್ನಡಿಗರನ್ನು ಕೆರಳಿಸಿದ ರಾಜ್ ಠಾಕ್ರೆ!

ಬೆಳಗಾವಿ (ಡಿ.8): ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದಿಂದ ಉಭಯ ರಾಜ್ಯಗಳಲ್ಲಿ (State) ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗಡಿ ವಿಚಾರ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಶಿವಸೇನೆ (Maharashtra Shivsena), ಎಂಎನ್ಎಸ್ ಕಾರ್ಯಕರ್ತರು (MNS Worker) ಕರ್ನಾಟಕ ಸಾರಿಗೆ ಬಸ್ ಮೇಲೆ ದಾಳಿ ಮಾಡಿದ್ದರು. ಇದಕ್ಕೆ ಬೆಳಗಾವಿಯಲ್ಲಿ ಕರವೇ ಪ್ರತ್ಯುತ್ತರ ನೀಡಿದ ಬಳಿಕ ಮತ್ತಷ್ಟು ಪರಿಸ್ಥಿತಿ ಹದಗೆಟ್ಟಿದೆ. ರಾಜ್ಯ ಸಾರಿಗೆ ಸಂಸ್ಥೆಯ 9 ಬಸ್‌ಗಳ (Buses) ಮೇಲೆ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಪುಂಡರು ದಾಳಿ (Raid) ಮಾಡಿದ್ದಾರೆ.


ಉಭಯ ರಾಜ್ಯಗಳ ಮಧ್ಯೆ ಬಸ್ ಸಂಚಾರ ಸ್ಥಗಿತ


2 ದಿನಗಳಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಉಭಯ ರಾಜ್ಯಗಳ ಮಧ್ಯೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪರಿಣಾಮ ಗಡಿ ಭಾಗದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ಉಂಟಾಗಿದೆ. ಗಡಿ ಭಾಗದ ಜನರು ಅನಿವಾರ್ಯವಾಗಿ ಖಾಸಗಿ ವಾಹನ ಅವಲಂಬಿಸಬೇಕಾಗಿದೆ‌.


ಗಡಿ ಭಾಗದ ಜನರಿಗೆ ಸಮಸ್ಯೆ


ಬಸ್ ಸಂಚಾರ ಸ್ಥಗಿತದಿಂದ ಬೆಳಗಾವಿ, ಚಿಕ್ಕೋಡಿ ಸಾರಿಗೆ ವಿಭಾಗಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಹೊಸ್ತಿಲ ಹುಣ್ಣಿಮೆ ನಿಮಿತ್ತ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಜಾತ್ರೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ 145 ಬಸ್‌ಗಳಲ್ಲಿ ಭಕ್ತರು ಆಗಮಿಸಿದ್ದರು. ಭಕ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಬೆಳಗಾವಿ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದರು. ಮಹಾರಾಷ್ಟ್ರ ವಾಹನಗಳಿಗೆ ರಕ್ಷಣೆ ನೀಡಿದ್ದರು.

ಬೆಳಗಾವಿ ಪೊಲೀಸರಿಗೆ ಧನ್ಯವಾದ


ಮಹಾರಾಷ್ಟ್ರಕ್ಕೆ ತೆರಳುವ ಮುನ್ನ ಮಹಾರಾಷ್ಟ್ರ ಸಾರಿಗೆ ಇಲಾಖೆ ಅಧಿಕಾರಿ ಶಿವರಾಜ್ ಸೋನವಾಲ್ಕರ್ ಪ್ರತಿಕ್ರಿಯಿಸಿದ್ದು, ಬೆಳಗಾವಿ ಪೊಲೀಸರು ನಮಗೆ ರಕ್ಷಣೆ ಕೊಟ್ಟಿದ್ದಾರೆ. ಪ್ರಯಾಣದ ವೇಳೆ ನಮಗೆ ಯಾವುದೇ ತೊಂದರೆ ಆಗಿಲ್ಲ. ಹೀಗಾಗಿ ಬೆಳಗಾವಿ ಪೊಲೀಸರಿಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.


ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ


ವಿಕೃತಿ ಮರೆಯುತ್ತಿರುವ ಶಿವಸೇನೆ, ಮಹಾರಾಷ್ಟ್ರ ನವನಿರ್ಮಾಣ ಸೇನೆ ಪುಂಡರ ವಿರುದ್ಧ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರ ಆಕ್ರೋಶ ಮುಂದುವರೆದಿದೆ. ಮಹಾ ಪುಂಡರ ಪುಂಡಾಟಿಕೆ ಖಂಡಿಸಿ ಕರವೇ ಕಾರ್ಯಕರ್ತರಿಂದ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು  ಪ್ರತಿಭಟನೆ ನಡೆಸಿದರು. ಕರವೇ ರಾಜ್ಯ ಸಂಚಾಲಕ ಮಹಾದೇವ ತಳವಾರ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಮಹಾರಾಷ್ಟ್ರ ಪುಂಡರ ದೌರ್ಜನ್ಯ ಖಂಡಿಸಿದರು.


ಮಹಾರಾಷ್ಟ್ರ ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ


ಮಹಾರಾಷ್ಟ್ರದಲ್ಲಿ ಕರ್ನಾಟಕ ಬ್ಯಾಂಕ್, ಸಾರಿಗೆ ಬಸ್ ಮೇಲೆ ಮಸಿ ಬಳಿದು ಉದ್ಧಟತನ ಪ್ರದರ್ಶಿಸುತ್ತಿದ್ದಾರೆ. ಮಸಿ ಬಳಿದ ಮಹಾರಾಷ್ಟ್ರ ಪುಂಡರ ವಿರುದ್ಧ ಕಠಿಣ ಕ್ರಮವಾಗಬೇಕು ಎಂದು ಆಗ್ರಹಿಸಿದರು.


ಈ ವೇಳೆ ಮಾತನಾಡಿದ ಕರವೇ ರಾಜ್ಯ ಸಂಚಾಲಕ ಮಹಾದೇವ ತಳವಾರ, ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿದ್ದರೂ ಮಹಾರಾಷ್ಟ್ರ ರಾಜಕೀಯ ನಾಯಕರು, ಸಂಘಟನೆಗಳ ಪುಂಡರು  ಕನ್ನಡಿಗರನ್ನು ಕೆಣಕುತ್ತಿದ್ದಾರೆ. ಮಹಾರಾಷ್ಟ್ರ ಸರ್ಕಾರ, ಸಂಘಟನೆಗಳ ವಿರುದ್ಧ ಕರ್ನಾಟಕ ಸರ್ಕಾರ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಬೇಕು. ಈ ಸಂಬಂಧ ಬೆಳಗಾವಿ ಡಿಸಿ ಮೂಲಕ ಸಿಎಂ ಬೊಮ್ಮಾಯಿಗೆ ಮನವಿ ಸಲ್ಲಿಸಿದ್ದೇವೆ ಎಂದರು.


ಗಡಿವಿವಾದ  ರಾಜ್ ಠಾಕ್ರೆ ಎಂಟ್ರಿ


ಗಡಿವಿವಾದ ವಿಚಾರವಾಗಿ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಎಂಟ್ರಿ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ನಾಯಕರಿಗೆ ಸಂಘರ್ಷ ಬೇಕಾಗಿದೆ. ಹೀಗಾಗಿ ಉದ್ದೇಶಪೂರ್ವಕವಾಗಿ ಮಹಾರಾಷ್ಟ್ರವನ್ನು ಗುರಿಯಾಗಿಸಲಾಗತ್ತಿದೆ. ಮಹಾರಾಷ್ಟ್ರಕ್ಕೆ ಏನು ಸಿಕ್ಕಿದೆಯೋ ಅದು ಸಂಘರ್ಷ ಮೂಲಕವೇ ಸಿಕ್ಕಿದೆ. ಹೀಗಾಗಿ ನಾವು ಸಂಘರ್ಷಕ್ಕಾಗಿ ನಾವು ಸದಾ ಸಿದ್ಧ ಎಂದು ಉದ್ಧಟತನದ ಟ್ವಿಟ್ ಮಾಡಿ ಕನ್ನಡಿಗರನ್ನು ಕೆರಳಿಸಿದ್ದಾರೆ.-

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button