ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ.
ಹಿರೇಮಳಗಾವಿ ಜೂನ್.16

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಳ್ಳ ಹೂಳೆತ್ತುವ ಕಾಮಗಾರಿ ನಡೆಯುತ್ತಿದ್ದು ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಹಾಗೂ ಜಲ ಸಂಜೀವಿನಿ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಸಿಗೆ ನೀರು ಎರೆಯುವುದರ ಮೂಲಕ ಗಣ್ಯರು ಚಾಲನೆ ನೀಡಿದರು. ಎನ್ ಸಿಡಿ ಕೌನ್ಸ್ಲರ್ ಮೋದಿನಸಾಬ ವಾಲೀಕಾರ ಮಾತನಾಡಿ ನರೇಗಾ ಕೂಲಿ ಕಾರ್ಮಿಕರಿಗಾಗಿ ಆರೋಗ್ಯ ತಪಾಸಣಾ ಶಿಬಿರಗಳನ್ನು ರಾಜ್ಯಾಧ್ಯಾಂತ ಹಮ್ಮಿಕೊಂಡಿದ್ದು.ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಬಳಿಕ ಕೂಲಿ ಕಾರ್ಮಿಕರಿಗೆ ಬಿಪಿ.ಶುಗರ್.ಟಿಬಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಯಿತು ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕ ಆಸ್ಪತ್ರೆಗೆ ಭೇಟಿ ನೀಡಲು ಸೂಚಿಸಿದರು. ಈ ಸಂದರ್ಭದಲ್ಲಿ ಐಇಸಿ ಸಂಯೋಜಿತ ಬಸವರಾಜ ಕೊಪ್ಪದ. ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ ಸಂಗನಗೌಡ ಪಾಟೀಲ. ಗ್ರಾಮ ಪಂಚಾಯತಿ ಕಾರ್ಯದರ್ಶಿ ದೇವೇಂದ್ರಪ್ಪ ಹರದೊಳ್ಳಿ. ಮುಖ್ಯ ವೈದ್ಯಾಧಿಕಾರಿ ಪ್ರಶಾಂತ ಚಿಂಚೋಳಿ. ತಾಂತ್ರಿಕ ಸಹಾಯಕ ಶಿವರಾಜ್ ಹವಾಲ್ದಾರ್. ಗ್ರಾಮ ಪಂಚಾಯತಿ ಅಧ್ಯಕ್ಷ ಮೇಟಿ. ಗ್ರಾಮ ಪಂಚಾಯತಿ ಸರ್ವ ಸದಸ್ಯರು.ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗ.ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ. ಕೆಎಚ್ ಪಿಟಿ ಸಿಬ್ಬಂದಿ ವರ್ಗ. ಆಶಾ ಕಾರ್ಯಕರ್ತೆಯರು. ಕಾಯಕ ಬಂಧುಗಳು ಉಪಸ್ಥಿತರಿದ್ದರು.