ಹೊನ್ನ ಸಂಭ್ರಮದ 2023 ನೇ ಸಾಲಿನ ಜನಪದ ಜಾತ್ರೆ ಆಗಷ್ಟ 22 ರಂದು ಜರುಗುವುದು.
ಹುನಗುಂದ ಆಗಷ್ಟ.21

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಭವನದಲ್ಲಿ ಆಗಸ್ಟ್ 22ರಂದು ಮಂಗಳವಾರ ಹೊನ್ನ ಸಂಭ್ರಮ 2023 ಜಾತ್ರೆಯನ್ನು ಜರಗಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ನಾಗರಾಜ ಮುದುಗಲ್ಲ ತಿಳಿಸಿದರು.ಶಾಸಕ ವಿಜಯಾನಂದ ಎಸ್ ಕಾಶಪ್ಪನವರ ಅಧ್ಯಕ್ಷತೆಯನ್ನು ವಹಿಸಿಕೊಂಡು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ತಹಶೀಲ್ದಾರ ನಿಂಗಪ್ಪ ಬಿರಾದಾರ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದು ವಿಶ್ರಾಂತ ಪ್ರಾಂಶುಪಾಲರಾದ ಎಮ್ಮೆ ತಳವಾರ, ಹಡಲ್ಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಎಸ್ ಎಲ್ ಪಾಟೀಲ್ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾಲೇಜ್ ಅಭಿವೃದ್ಧಿ ಸಮಿತಿಯ ಗೌರವಾನ್ವಿತ ಸರ್ವ ಸದಸ್ಯರು ವಿಶೇಷ ಅಹ್ವಾನಿತರಾಗಿ ಆಗಮಿಸಲಿದ್ದಾರೆ. ಹುನಗುಂದ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್ ಮುದುಗಲ್ ದೈಹಿಕ ನಿರ್ದೇಶಿಕರಾದ ಬಿ ವೈ ಆಲೂರು ಸಾಂಸ್ಕೃತಿಕ ವಿಭಾಗದ ಸಂಚಾಲಕರಾದ ನಿಜೇಶಕುಮಾರ.ಡಿ ಉಪಸ್ಥಿತರಿದ್ದು. ಇದೇ ಸಂದರ್ಭದಲ್ಲಿ ಬೆಳಗ್ಗೆ 9:30 ಗಂಟೆಗೆ ಬಸವ ಮಂಟಪದಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವರೆಗೆ ಮೆರವಣಿಗೆ ಮುಖಾಂತರ ತಲುಪಿ ಕಾರ್ಯಕ್ರಮ ಜರುಗುವುದು ಎಂದು ತಿಳಿಸಿದರು.
ತಾಲೂಕ ವರದಿಗಾರರು: ಮಲ್ಲಿಕಾರ್ಜುನ.ಎಂ.ಬಂಡರಗಲ್ಲ