ಬೆಳಗಾವಿ- ಮಹಾರಾಷ್ಟ್ರ ಮತ್ತೇ ಖ್ಯಾತೆ ತಗೆದ “ಶಿವಸೇನೆ”..!?
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರವನ್ನು ವಿಧಾನ ಪರಿಷತ್ ನಲ್ಲಿ ಪ್ರಸ್ತಾಪಿಸಿದ ಉದ್ಧವ್ ಠಾಕ್ರೆ
ಮಹಾರಾಷ್ಟ್ರ :
ಮತ್ತೇ ಖ್ಯಾತೆ ತಗೆದ ಶಿವಸೇನೆ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯ ಮಂತ್ರಿ ಉದ್ಧವ್ ಠಾಕ್ರೆ,
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸೋಮವಾರ ರಾಜ್ಯ ವಿಧಾನ ಪರಿಷತ್ತಿನಲ್ಲಿ “ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ” ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಕೇಂದ್ರ ಸರ್ಕಾರ ಘೋಷಿಸಬೇಕು ಎಂದು ಹೇಳಿದ್ದಾರೆ. ಈ ಮೂಲಕ ಬೆಳಗಾವಿ,ಕಾರವಾರ ಹಾಗೂ ನಿಪ್ಪಾಣಿ ಯನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡುವಂತೆ ಮನವಿ ಮಾಡಿದ ಉದ್ಧವ್ ಠಾಕ್ರೆ.
ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದದ ಕುರಿತು ಮೇಲ್ಮನೆಯಲ್ಲಿ ಮಾತನಾಡಿದ ಶಿವಸೇನೆ (UBT) ನಾಯಕ ಠಾಕ್ರೆ, ಇದು ಕೇವಲ ಭಾಷೆ ಮತ್ತು ಗಡಿಯ ಪ್ರಕರಣವಲ್ಲ, ಆದರೆ “ಮಾನವೀಯತೆ” ಎಂದು ಹೇಳಿದರು.