ವೀರಾಪುರದ ಆಂಧ್ರ ಗಡಿ ಭಾಗದ ಮೂರು ಕೋಟಿ 3₹. ವೆಚ್ಚದಲ್ಲಿ ರಸ್ತೆ ಕಾಮಗಾರಿ ಭೂಮಿ ಪೂಜೆ – ಮಾಡಿದ ಶಾಸಕರು.
ವೀರಾಪುರ ಡಿ.08

ಇಂದು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ವೀರಪುರದಲ್ಲಿ ಜನಪ್ರಿಯ ಶಾಸಕರಾದ ಶ್ರೀ ಎನ್ ವೈ ಗೋಪಾಲಕೃಷ್ಣ ರವರು ಅಶೋಕ ಶಿಲಾ ಶಾಸನ ಮುಖ್ಯ ರಸ್ತೆಯಿಂದ ಆಂಧ್ರ ಗಡಿ ವರೆಗೆ ರಾಮಸಾಗರ, ದೇವಸಮುದ್ರ, ತಿಮ್ಲಾಪುರ ಸುಮಾರು 3₹ ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ ನೆರವೇರಿಸಿದರು.ಸ್ಥಳೀಯ ಮುಖಂಡರುಗಳು, ಅಭಿಮಾನಿಗಳು, ಕಾರ್ಯಕರ್ತರು,ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು