ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಇನ್ನಿಲ್ಲ….!

ವಿಜಯಪುರ :

ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ನಿನ್ನೆ ಸಂಜೆ 6 ಗಂಟೆಗೆ ಲಿಂಗೈಕ್ಯರಾಗಿದ್ದಾರೆ. ಇಂದು ನಸುಕಿನ ಜಾವ 4 ಗಂಟೆಯವರೆಗೆ ಜ್ಞಾನಯೋಗಾಶ್ರಮದ ಆವರಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೆಳಿಗ್ಗೆಯಿಂದ ಮಧ್ಯಾಹ್ನ 3ರ ವರೆಗೆ ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು. ಸಂಜೆ 5ರ ನಂತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರು ತಿಳಿಸಿದ್ದಾರೆ.

 ವಿಜಯಪುರ ನಗರದ ಜ್ಞಾನಯೋಗಾಶ್ರಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.B. ದಾನಮ್ಮ ಅವರು, ಸಂಜೆ 6 ಗಂಟೆಗೆ ಶ್ರೀಗಳು ಲಿಂಗೈಕ್ಯರಾಗಿದ್ದಾರೆ. ನಸುಕಿನ ಜಾವ 4 ಗಂಟೆಯವರೆಗೆ ಜ್ಞಾನಯೋಗಾಶ್ರಮದ ಆವರಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 3ರ ವರೆಗೆ ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ಸ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಳಿಸಲಾಗಿದೆ. ಸಂಜೆ 5ರ ನಂತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿಸಿದ್ದಾರೆ.

 ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಗಳು ತಮ್ಮ ಕೊನೆಯಾಸೆಯನ್ನು ವಿಲ್ ನಲ್ಲಿ ಬರೆದಿಟ್ಟಿದ್ದರು ” ಸಮಾಧಿ ಆಗಬಾರದು, ಗುಡಿ ಆಗಬಾರದು, ಪೂಜೆ, ಪುನಸ್ಕಾರಗಳು ಆಗಬಾರದು” ಎಂದು ವಿಲ್‌ನಲ್ಲಿ ಬರೆಸಿದ್ದರು. ಅವರ ಆಶಯದಂತೆ ಸಾಮಾನ್ಯ ಸಾಮಾನ್ಯರಂತೆ ಅಂತ್ಯ ಸಂಸ್ಕಾರ ನಡೆಯಲಿದೆ. “ನಿಸರ್ಗದಿಂದ ಬಂದವನು, ನಿಸರ್ಗದಲ್ಲೇ ಲೀನವಾಗಬೇಕು” ಎಂದು ಅವರ ಪರಮ ಆಶಯವಾಗಿತ್ತು. ಜ್ಞಾನ ದಾಸೋಹ ನಿರಂತರವಾಗಿ ಪ್ರವಚನಗಳ ಮೂಲಕ ನಡೆಸಿದ್ದರು. ತತ್ವಜ್ಞಾನ ಮತ್ತು ದೇಶೀಯ, ಪಾಶ್ಚಾತ್ಯ ಸಾಹಿತ್ಯದಲ್ಲಿ ಅಪಾರ ಆಸಕ್ತಿ ಹೊಂದಿದ್ದವರು ಹಾಗೂ ಅಧ್ಯಯನ ನಡೆಸಿದ್ದರು. ಅಧ್ಯಾತ್ಮಕ ಮತ್ತು ಸಾಹಿತ್ಯ ಎರಡೂ ಕ್ಷೇತ್ರಗಳಲ್ಲಿ ನಿರಂತರ ಆಸಕ್ತಿ ಹೊಂದಿದ್ದರು.

 “ಇತರರ ಏಳಿಗೆಗಾಗಿ ನಿರಂತರವಾಗಿ ಶ್ರಮಿಸಿದ ಸಿದ್ದೇಶ್ವರ ಸ್ವಾಮೀಜಿ ಅವರ ಸೇವೆಗಳು ಸದಾ ನೆನಪಿನಲ್ಲಿ ಉಳಿಯುತ್ತಾರೆ”. ಎಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದ್ದಾರೆ.

 ಎಂದೆಂದಿಗು ಪ್ರಶಸ್ತಿಗಾಗಿ ಹಂಬಲಿಸಿಲ್ಲ. ಸತ್ಕಾರ ಸ್ವೀಕರಿಸಿದವರಲ್ಲ, ಜೇಬಿಲ್ಲದ ಎರಡು ಜತೆ ಬಟ್ಟೆಯಲ್ಲಿಯೇ ಹಣ ಮುಟ್ಟದೆ ಮಾದರಿ ಜೀವನ ನಡೆಸಿದವರು. ಇಂತಹ ಶ್ರೇಷ್ಠ ಸಂತ ಬೇಗ ಗುಣಮುಖರಾಗಿ ನಮ್ಮೆಲ್ಲರಿಗೆ ಮಾರ್ಗದರ್ಶನ ನೀಡಲಿ’ ಎಂದು ಭಕ್ತರು, ವಿದ್ಯಾರ್ಥಿಗಳು ನಿರಂತರ ಪ್ರಾರ್ಥನೆ ಸಲ್ಲಿಸುತ್ತಿದ್ದರು ಆದರೆ ದೇವರಿಗೆ ಆ ಪ್ರಾರ್ಥನೆ ಕೇಳಲಿಲ್ಲ ವೆನಿಸುತ್ತದೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button