ರಾಜ್ಯದಲ್ಲಿ 2500 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ….!

ಶಿವಮೊಗ್ಗ :

ಇಂದು ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದ್ದು, ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಇಲಾಖೆಯ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಹೊಸ ಕಾಯ್ದೆ ಪ್ರಕಾರ ಪರಿಶಿಷ್ಟ ಜಾತಿ-ಪಂಗಡಕ್ಕೆ ಮೀಸಲು ಆಧರಿಸಿ ಶಿಕ್ಷಕರ ನೇಮಕಾತಿ ನಡೆಯುವುದಾಗಿ ಇಲಾಖೆಯು ಹೇಳಿದೆ. 

ಇದರಲ್ಲಿ 250 ಮಂದಿ ದೈಹಿಕ ಶಿಕ್ಷಕರ ನೇಮಕ ಕೂಡ ನಡೆಯಲಿದೆ ಎಂದರು.

ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ (NEP) ಇನ್ನೂ ಜಾರಿಯಾಗಿಲ್ಲ. ರಾಜ್ಯದ 300ರಿಂದ 400 ಶಾಲೆಗಳಲ್ಲಿ ಜನವರಿ 26ರಿಂದ ಜಾರಿಗೊಳಿಸಲು ಯೋಜಿಸಿದ್ದೇವೆ . ಅದಕ್ಕೆ ಅಗತ್ಯವಿರುವ ಪಠ್ಯಕ್ರಮ ಕೂಡ ರೂಪುಗೊಂಡಿದೆ. NEP ಪಠ್ಯ ಆಧಾರಿತ ಅಲ್ಲ . ಚಟುವಟಿಕೆ ಆಧಾರಿತ ಶಿಕ್ಷಣ, ಅಲ್ಲಿ ಬಹಳ ಪುಸ್ತಕಗಳು ಇರುತ್ತವೆ ಎಂದೇನೂ ನನಗೆ ಅನ್ನಿಸಿಲ್ಲ. ಪಠ್ಯಕ್ರಮಕ್ಕೆ ತಕ್ಕಂತೆ ಶಿಕ್ಷಕರಿಗೆ ತರಬೇತಿ ನೀಡಿ ಅವರನ್ನು ಸಜ್ಜುಗೊಳಿಸಲಾಗುವುದು ಎಂದು ಹೇಳಿದರು.

15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಚಾರ ಹೈಕೋರ್ಟ್‌ನಲ್ಲಿದೆ. ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟು ಷರತ್ತಿನ ಮೇರೆಗೆ ನೇಮಕಾತಿ ಆದೇಶ ನೀಡಿ ಎಂಬುದು ಆಯ್ಕೆಯಾದ ಅಭ್ಯರ್ಥಿಗಳ ಅಳಲು. ಅದು ಕೂಡ ಗಮನದಲ್ಲಿದೆ. ಜನವರಿ 18ಕ್ಕೆ ಈ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಅಲ್ಲಿನ ಪ್ರಕ್ರಿಯೆ ನೋಡಿಕೊಂಡು ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಸಚಿವ ನಾಗೇಶ್ ಪ್ರತಿಕ್ರಿಯಿಸಿದರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button