ರಾಜ್ಯದಲ್ಲಿ ಇತ್ತೀಚಿಗೆ ಸುದ್ದಿಯಲ್ಲಿ ಕಾಣಬರುತ್ತಿರುವ ‘ಸ್ಯಾಂಟ್ರೊ ರವಿ’ ಯಾರು?, ಅವನ ಇತಿಹಾಸ ಏನು? ಅವನು ಏನು ಮಾಡ್ತಿದ್ದ….?

ಬೆಂಗಳೂರು:
ರಾಜ್ಯದಲ್ಲಿ ಇತ್ತೀಚಿಗೆ ಹೆಚ್ಚು ಸುದ್ದಿಯಲ್ಲಿರುವ ‘ಸ್ಯಾಂಟ್ರೊ ರವಿ’ ಯಾರು? ಇವನ ಇತಿಹಾಸ ಏನು?
ಎಂದು ಕೆದಕಿದರೆ, ದೊಡ್ಡ ಕಥೆಯೇ ತೆರೆದುಕೊಳ್ಳುತ್ತದೆ. ಈತ ಮೂಲತಃ ಮಂಡ್ಯ ಜಿಲ್ಲೆಯವನು, ಇವನನ್ನು ಮಂಡ್ಯ ಮಂಜುನಾಥ್ ಎಂದು ಕರೆಯುತ್ತಿದ್ದರು ಈತನಿಗೆ ಇನ್ನೊಂದು ಹೆಸರಿದೆ ಅದುವೇ”ಸ್ಯಾಂಟ್ರೋ ರವಿ” ಈತನಿಗೆ ಈ ಹೆಸರು ಬರಲು ಅವನು ಮಾಡಿದ್ದು ಅಂತಹ ಕೆಲಸ.

ಈತನ ತಂದೆ ಸಮಾಜದ ಗೌರವಾನ್ವಿತ ಅಬಕಾರಿ ಇಲಾಖೆಯ ಇನ್‌ಸ್ಪೆಕ್ಟರ್ ಆಗಿದ್ದರು . ಆದರೆ ಮಗನಾದ ಮಂಜುನಾಥ್, ಸಣ್ಣ ವಯಸ್ಸಿನಲ್ಲಿಯೇ ದಾರಿ ತಪ್ಪಿದ್ದ, ಅಪರಾಧ ಹಿನ್ನೆಲೆಯುಳ್ಳವರ ಸಹವಾಸ ಮಾಡಿದ್ದ, ಅವರೊಂದಿಗೆ ಕೂಡಿ ಸಮಾಜಘಾತಕ ಕೆಲಸ ಮಾಡ್ತಿದ್ದ, ತಂದೆ ಅಕಾಲಿಕ ಮರಣವಾದ ನಂತರ, ಮಂಜುನಾಥ್ ಮತ್ತಷ್ಟು ಹಾಳಾಗಿದ್ದ .

ಇವನು ಮೊದಲು ಆರಂಭಿಸಿದ ದಂಧೆಯೆ ವೇಶ್ಯಾವಾಟಿಕೆ , ವೇಶ್ಯಾವಾಟಿಕೆ ಮೂಲಕ ‘ಸ್ಯಾಂಟ್ರೊ ರವಿ’ ಆಗಿ ಬೆಳೆದು, ಇಂದು ಹಲವು ರಾಜಕಾರಣಿಗಳ ಮೂಲಕ ವರ್ಗಾವಣೆ ದಂಧೆಯಲ್ಲಿ ಗುರುತಿಸಿಕೊಂಡು ರಾಜ್ಯಾದ್ಯಂತ ಸುದ್ದಿಯಾಗಿದ್ದಾನೆ.

ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ ಈತ, ಮಂಡ್ಯದಲ್ಲಿ ಕೆಲ ಮಹಿಳೆಯರ ಸಂಗ ಬೆಳೆಸಿದ್ದ. ಅವರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸಲಾರಂಭಿಸಿದ್ದ. ಗ್ರಾಹಕರನ್ನು ಪರಿಚಯಿಸಿಕೊಳ್ಳುತ್ತಿದ್ದ ಈತ, ಅವರು ಹೇಳಿದ ಸ್ಥಳಕ್ಕೆ ಹಾಗೂ ಸಮಯಕ್ಕೆ ಮಹಿಳೆಯರನ್ನು ಕರೆದದೊಯ್ದು “ಪಿಂಪ್” ಕೆಲಸ ಮಾಡ್ತಿದ್ದ, ಈ ದಂಧೆಗೆ ಈತ ಸ್ಯಾಂಟ್ರೊ ಕಾರೊಂದನ್ನು ಖರೀದಿಸಿದ್ದ . ಈ ಕಾರಿನಲ್ಲಿ ಮಹಿಳೆಯರನ್ನು ಸಪ್ಲೈ ಮಾಡ್ತಿದ್ದ. ಈತನ ಈ ದಂಧೆಯನ್ನು ಪತ್ತೆ ಮಾಡಿದ್ದ ಮಂಡ್ಯದ ಪೊಲೀಸರು, ಮಂಜುನಾಥ್‌ನನ್ನು 2000ನೇ ಇಸವಿಯಲ್ಲಿ ಬಂಧಿಸಿದ್ದರು. ‘ಸ್ಯಾಂಟ್ರೊ ಕಾರು’ ಬಳಸಿ ‘ರವಿ ‘ ಹೆಸರಿನಲ್ಲಿ ವೇಶ್ಯಾವಾಟಿಕೆ ಮಾಡುತ್ತಿದ್ದರಿಂದ ಈತನಿಗೆ, ಗಿರಾಕಿಗಳು “ಸ್ಯಾಂಟೊ ರವಿ” ಹೆಸರು ಕೊಟ್ಟರು, ಅಂದಿನಿಂದ ಈತ, ಮಂಜುನಾಥ್ ಅಲಿಯಾಸ್ ‘ಸ್ಯಾಂಟ್ರೊ ರವಿ’ಯಾದ.

ಒಮ್ಮೆ ಸಿಕ್ಕಿಬಿದ್ದ ಈತನ ಮೇಲೆ ಪೊಲೀಸರು ಕಣ್ಣಿಟ್ಟಿದ್ದರು. ಇದು ಮಂಜುನಾಥ್‌ನ ವೇಶ್ಯಾವಾಟಿಕೆ ದಂಧೆಗೆ ಅಡ್ಡಿಯಾಯಿತು. ಅವಾಗಲೇ ಆತ, ಮಂಡ್ಯ ಬಿಟ್ಟು ಮೈಸೂರು ಸೇರಿದ್ದ. ಅಲ್ಲಿಯೇ ತನ್ನ ವೇಶ್ಯಾವಾಟಿಕೆ ಮುಂದುವರಿಸಿದ್ದ.

ಮಹಿಳೆಯರ ಜೊತೆಯಲ್ಲಿ ಹುಡುಗಿಯರನ್ನು ತನ್ನ ಗಾಳಕ್ಕೆ ಸಿಲುಕಿಸಿಕೊಂಡ, ಸಣ್ಣ-ಪುಟ್ಟ ಕೆಲಸ ಮಾಡುತ್ತಲೇ ತೆರೆಮರೆಯಲ್ಲಿ ವೇಶ್ಯಾವಾಟಿಕೆ ದಂಧೆಯ ವ್ಯಾಪ್ತಿ ಹೆಚ್ಚಿಸಿದ, ನಂತರ, ರಾಜಕಾರಣಿಗಳ ಪರಿಚಯವಾಯಿತು. ಅವರಿಗೂ ವೇಶ್ಯಾವಾಟಿಕೆ ಸೇವೆ ನೀಡಲಾರಂಭಿಸಿದ್ದ. ಅಂದಿನಿಂದಲೇ ಈತನಿಗೆ ರಾಜಕಾರಣಿಗಳು ಆಪ್ತರಾದರು. ಕೆಲ ರಾಜಕಾರಣಿಗಳು ಹೇಳಿದ ಕೂಡಲೇ, ಅವರ ವಿಳಾಸಕ್ಕೆ ಹುಡುಗಿಯರನ್ನು ಕರೆದುಕೊಂಡು ಹೋಗುತ್ತಿದ್ದನೆಂಬ ಮಾಹಿತಿ ಪೊಲೀಸ್ ವಲಯದಲ್ಲಿದೆ.

ಉದ್ಯೋಗ, ಹಣದ ಆಮಿಷವೊಡ್ಡಿ ಯುವತಿಯರನ್ನು ವೇಶ್ಯಾವಾಟಿಕೆಗೆ ಬಳಸಿಕೊಳ್ಳುತ್ತಿದ್ದ. ಇಷ್ಟವಿಲ್ಲದಿದ್ದರೂ ಕೆಲವರು ಈತನ ಬೆದರಿಕೆಗೆ ಹೆದರಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಯಾರಾದರೂ ಈತನನ್ನು ಪ್ರಶ್ನಿಸಿದರೆ, ರಾಜಕಾರಣಿಗಳನ್ನು ಬಳಸಿಕೊಂಡು ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುತ್ತಿದ್ದ.

ಕೆಲ ಯುವತಿಯರಿಗೆ ಮತ್ತ ಬರುವ ಔಷಧಿ ಬೆರೆಸಿದ್ದ ಪಾನೀಯ ಕುಡಿಸಿ, ಅವರನ್ನು ನಗ್ನಗೊಳಿಸಿ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳುತ್ತಿದ್ದ. ನಂತರ, ಅದೇ ವಿಡಿಯೊ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪವೂ ಈತನ ಮೇಲಿದೆ. ಎಂದು ವರದಿಗಳು ಹೇಳಿವೆ.

 

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button