ಅಕ್ರಮ ಕಲ್ಲು ಗಣಿಗಾರಿಕೆ ದಂಧೆಯ – ವಿರುದ್ಧ ಹೋರಾಟ.
ಮಾನ್ವಿ ಜ.21

ತಾಲೂಕಿನ ನೀರಮಾನ್ವಿ ಗ್ರಾಮದಲ್ಲಿ ಸರ್ವೆ ನಂಬರ್ 55/1 ರಲ್ಲಿ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ಸರಕಾರಕ್ಕೆ ರಾಜಧನ ಕಟ್ಟದೆ ಮೋಸ ಮಾಡಲಾಗಿದೆ. ಹೀಗಾಗಿ ರಾಯಚೂರು ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪುಷ್ಪಲತಾ ಅವರೆ ನೇರ ಹೊಣೆ ಎಂದು ಆರೋಪಿಸಿ ದಲಿತ ಮುಖಂಡ ಗುರುರಾಜ ನಾಗಲಾಪುರ ಪ್ರತಿಭಟನೆ ನಡೆಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಶಾಸಕರ ಭವನದ ಮುಂದೆ ಧರಣಿ ನಡೆಸಿ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪುಷ್ಪಲತಾ ವಿರುದ್ಧ ಧಿಕ್ಕಾರ ಕೂಗಿದರು. ನೀರಮಾನ್ವಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದು, ಅಂದಾಜು ಒಂದು ಲಕ್ಷ ಟನ್ ಹೆಚ್ಚುವರಿ ಕಲ್ಲು ಗಣಿಗಾರಿಕೆ ಮಾಡಿದ್ದು ಹಿರಿಯ ಅಧಿಕಾರಿಗಳಿಂದ ಪುನಃ ಸರ್ವೆ ಮಾಡಿಸಬೇಕು ಎಂದು ಹೋರಾಟಗಾರರು ಒತ್ತಾಯಿಸಿದರು.
ಸರಕಾರದ ನಿಯಮದ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಕಲ್ಲು ಕಟ್ಟಡ ಕ್ವಾರಿಯನ್ನು ಗುರುತಿಸಿ ಟೆಂಡರ್ ಕರೆಯಲು ಅವಕಾಶ ಇದೆ. ಆದರೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪುಷ್ಪಲತಾ ಅವರು ರಾಯಚೂರು ಜಿಲ್ಲೆಯಲ್ಲಿ ಇದುವರೆಗೂ ಟೆಂಡರ್ ಕರೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ