ವಿದ್ಯಾರ್ಥಿಗಳ ವೃದ್ಧಿಗೆ ಶಿಕ್ಷಕರ ಕೊಡುಗೆ – ಅಪಾರ ಶಾಸಕ ಹಂಪಯ್ಯ ನಾಯಕ.
ಮಾನ್ವಿ ಫೆ.02

ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ವೃದ್ಧಿ ಯಾಗುವುದರಲ್ಲಿ ಮೊದಲಿಗರು ಯಾರು ಎಂದರೆ ಶಿಕ್ಷಕರು ಎಂದು ಶಾಸಕ ಹಂಪಯ್ಯ ನಾಯಕ ತಿಳಿಸಿದರು.
ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಯ ಬೆಳ್ಳಿ ಮಹೋತ್ಸವ ಸಂಭ್ರಮ ಹಾಗೂ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ನೇತಾಜಿ ನೆರಳು ಎನ್ನುವ ಸ್ಮರಣ ಸಂಚಿಕೆಯನ್ನು ಶುಕ್ರವಾರ ಬಿಡುಗಡೆ ಗೊಳಿಸಿ ಮಾತನಾಡಿದರು.
ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶ ದಿಂದ ಪ್ರಾರಂಭವಾದ ನೇತಾಜಿ ಸಂಸ್ಥೆಯು ಪ್ರಾಥಮಿಕ ಶಿಕ್ಷಣ ದಿಂದ ಕಾಲೇಜು ಹಂತದವರೆಗೂ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡುತ್ತಿದ್ದು. ಸಂಸ್ಥೆಯ ಅಧ್ಯಕ್ಷ ಕೆ.ಈ ನರಸಿಂಹ ವಿಜಯಲಕ್ಷ್ಮಿ ದಂಪತಿಗಳು ಶಿಕ್ಷಣ ಸಂಸ್ಥೆಯನ್ನು ಕಟ್ಟುವುದಕ್ಕೆ ಶ್ರಮಿಸಿದ್ದಾರೆಂದು ಬಣ್ಣಿಸಿದರು.
ಶಿಕ್ಷಣ ಸಂಸ್ಥೆ ನಡೆದು ಬಂದ ಹಾದಿಯನ್ನು ನೇತಾಜಿ ನೆರಳು ಸ್ಮರಣ ಸಂಚಿಕೆ ಒಳಗೊಂಡಿದ್ದು ಒಂದು ಉತ್ತಮ ಶಿಕ್ಷಣ ಸಂಸ್ಥೆಯನ್ನು ಯಾವರೀತಿ ಕಟ್ಟಬೇಕು ಎನ್ನುವ ಸಂಪೂರ್ಣ ವಿವರವನ್ನು ಕೃತಿಯಲ್ಲಿ ವಿವರಿಸಲಾಗಿದೆ. ಇಲ್ಲಿಯ ಶಿಕ್ಷಕರು ಕೂಡ ಸಮರ್ಪಣಾ ಮನೋಭಾವದಿಂದ ಶ್ರಮಿಸುತ್ತಿರುವು ದರಿಂದ ಸಂಸ್ಥೆಯು ಬೆಳೆಯುವುದಕ್ಕೆ ಸಾಧ್ಯವಾಗಿದೆ ಎಂದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ