ಮಥುರಾದಲ್ಲಿ 9 ವರ್ಷದ ಬಾಲಕಿ ಮೇಲೆ ನೆರೆ ಮನೆಯ ಅಪ್ರಾಪ್ತ ಬಾಲಕರಿಂದ ಅತ್ಯಾಚಾರ….!
ಮಥುರಾದಲ್ಲಿ 9 ವರ್ಷದ ಬಾಲಕಿ ಮೇಲೆ ನೆರೆ ಮನೆಯ ಅಪ್ರಾಪ್ತ ಬಾಲಕರಿಂದ ಅತ್ಯಾಚಾರ....! ಕೃತ್ಯದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ...!
ಉತ್ತರಪ್ರದೇಶ (ಮಥುರಾ) :
ಪ್ರದೇಶದ ಮಥುರಾದಲ್ಲಿ ಇಬ್ಬರು ಅಪ್ರಾಪ್ತ ಬಾಲಕರು ಒಂಬತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದು ತಮ್ಮ ಕೃತ್ಯದ ವೀಡಿಯೊ ಮಾಡಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ . ಸಂತ್ರಸ್ತೆಯ ಸಂಬಂಧಿಕರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ,
ಇನ್ನೂ, 9 ವರ್ಷದ ಬಾಲಕಿಯು ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ನೆರೆಯ ಮನೆಯ ಇಬ್ಬರು ಅಪ್ರಾಪ್ತ ಹುಡುಗರು ಆಕೆಯ ಮನೆಗೆ ನುಗ್ಗಿದ್ದಾರೆ. ಈ ವೇಳೆ ಆ ಇಬ್ಬರು ಹುಡುಗರು ಆಕೆಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ. ಆದರೆ ಆಕೆ ಇದನ್ನು ಪ್ರತಿಭಟಿಸಿದಾಗ ಆಕೆಯ ಮೇಲೆ ಇಬ್ಬರು ಹುಡುಗರು ಅತ್ಯಾಚಾರವೆಸಗಿದ್ದಾರೆ.ಈ ಬಗ್ಗೆ ಯಾರಿಗಾದರೂ ಹೇಳಿದರೆ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ಮಾದ್ಯಮಗಳಿಗೆ ತಿಳಿಸಿದ್ದಾರೆ.
ಸಂತ್ರಸ್ತೆಯ ಸಂಬಂಧಿಕರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೆದ್ದಾರಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್(SHO) ಛೋಟೆ ಲಾಲ್ ಹೇಳಿದ್ದಾರೆ.