‘ದೇಶಕ್ಕಾಗಿ ಪಕ್ಷಕ್ಕಾಗಿ ಬಿಜೆಪಿಯನ್ನು ಗೆಲ್ಲಿಸಿ ‘:- ತರೀಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಪ್ರಬಲ ಆಕಾಂಕ್ಷಿ K.H. ಮಹೇಂದ್ರರವರು…..!
ಚಿಕ್ಕಮಗಳೂರು (ಫೆ.7) :
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಯಾದ ಕೆ ಎಚ್ ಮಹೇಂದ್ರರವರು, ಪಟ್ಟಣದ ಶೃಂಗೇರಿ ಶಾರದಾ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ದೇಶಕ್ಕಾಗಿ ಪಕ್ಷಕ್ಕಾಗಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಹೇಳಿದರು.
ಕಳೆದ 25 ವರ್ಷಗಳಿಂದ ಗ್ರಾಮ ಪಂಚಾಯತಿ ಸದಸ್ಯನಾಗಿ, ವಿ ಎಸ್ ಎಸ್ ನ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯತಿಯ ಸದಸ್ಯರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದೇನೆ. ಆದ್ದರಿಂದ ಕ್ಷೇತ್ರದ್ಯಾಂತ ಜನಸಾಮಾನ್ಯರ ಕಷ್ಟ ಸುಖಗಳಿಗೆ ಭಾಗಿಯಾಗಿದ್ದೇನೆ ಸಾವಿರಾರು ಜನರ ಸಮಸ್ಯೆಗಳನ್ನು ಬಗೆಹರಿಸಿದ್ದೇನೆ, ಆದ್ದರಿಂದ ಜನರ ಪ್ರೀತಿ ವಿಶ್ವಾಸ ಗಳಿಸಿದ್ದು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿರುತ್ತೇನೆ ಬಿಜೆಪಿಯನ್ನು ಗೆಲ್ಲಿಸಿ ಎಂದು ಹೇಳಿದರು. ಅಂತಿಮವಾಗಿ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ಹೇಳಿದರು.