26 ಜನ ವಿಕಲಚೇತನರಿಗೆ ಕಂಪ್ಯೂಟರ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಗೀತಾ ಶಂಕರ್…..!
ಚಿಕ್ಕಮಗಳೂರು (ತರೀಕೆರೆ . ಫೆ.23) :
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತಿ ಚಿಕ್ಕಮಗಳೂರು ತಾಲೂಕು ಪಂಚಾಯಿತಿ ತರೀಕೆರೆ ಹಾಗೂ ಆಲ್ಫಾ ಕಂಪ್ಯೂಟರ್ ಸೆಂಟರ್, ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ತರೀಕೆರೆ ತಾಲೂಕಿನ 26 ಗ್ರಾಮ ಪಂಚಾಯಿತಿಗಳಿಂದ ಆಯ್ಕೆ ಮಾಡಿದ 26 ಜನ ವಿಕಲಚೇತನರಿಗೆ ಕಂಪ್ಯೂಟರ್ ತರಬೇತಿ ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಕಾರ್ಯಾ ನಿರ್ವಹಣಾಧಿಕಾರಿಯದ ಗೀತಾ ಶಂಕರ್ ಅವರು ಉದ್ಘಾಟನೆ ಮಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾದ ಗಣೇಶ್ ರವರು ಕಂಪ್ಯೂಟರ್ ಸೆಂಟರ್ ನ ಪ್ರಾಂಶುಪಾಲರಾದ ನಾಗವೇಣಿ, ಶಿಕ್ಷಕರಾದ ಗೋವಿಂದ್, ಹಾಗೂ ಪತ್ರಿಕರ್ತರ ಸಂಘದ ಅಧ್ಯಕ್ಷರಾದ ಬಿ ಕೃಷ್ಣ ನಾಯಕ್ ಉಪಸ್ಥಿತರಿದ್ದರು.