ಪತ್ರಿಕಾ ಗೋಷ್ಠಿ ನಡೆಸಿ KRS ಪಕ್ಷದ ಪ್ರಣಾಳಿಕೆ ಬಿಡುಗಡೆ

ಪತ್ರಿಕಾ ಗೋಷ್ಠಿ ನಡೆಸಿ KRS ಪಕ್ಷದ ಪ್ರಣಾಳಿಕೆ ಬಿಡುಗಡೆ .

ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಯಾವೆಲ್ಲಾ ಯೊಜನೆಗಳನ್ನು ರೂಪಿಸಬೇಕು ಮತ್ತು ಕಾರ್ಯಕ್ರಮಗಳನ್ನು ಅನುಷ್ಟಾನಕ್ಕೆ ತರಬೇಕು ಎನ್ನುವ ನಿಟ್ಟಿನಲ್ಲಿ ರಾಜ್ಯದ ಜನಸಾಮಾನ್ಯರ ಜೊತೆ ಮತ್ತು ಚಿಂತಕರು ಹಾಗೂ ತಜ್ಞರ ಜೊತೆ ಹಲವಾರು ಸಭೆಗಳು ಮತ್ತು ಸಂವಾದಗಳನ್ನು ನಡೆಸಿದ ನಂತರ ಪಕ್ಷವು ಪ್ರಣಾಳಿಕೆಯನ್ನು ಸಿದ್ದಪಡಿಸಿದ್ದು, ಅದರ ಪ್ರಮುಖ ಅಂಶಗಳನ್ನು ಈ ಪತ್ರಿಕಾ ಟಿಪ್ಪಣಿಯಲ್ಲಿ ವಿವರಿಸಲಾಗಿದೆ. • ರಾಜ್ಯ ಸರ್ಕಾರದಲ್ಲಿ ಪ್ರಸ್ತುತ ಖಾಲಿ ಇರುವ 3 ಲಕ್ಷಕ್ಕಿಂತಲೂ ಹೆಚ್ಚಿನ ಹುದ್ದೆಗಳನ್ನು ಒಂದು ವರ್ಷದ ಒಳಗೆ ಭರ್ತಿ ಮಾಡಲಾಗುವುದು.


• ಭ್ರಷ್ಟಾಚಾರರಹಿತ, ಪಾರದರ್ಶಕ ಮತ್ತು ಜವಾಬ್ದಾರಿಯುತ ಆಡಳಿತಕ್ಕಾಗಿ ಮತ್ತು ಲಂಚ/ಭ್ರಷ್ಟಾಚಾರ ನಿಗ್ರಹಕ್ಕಾಗಿ ಲೋಕಾಯುಕ್ತ ಬಲಪಡಿಸಲು ಕ್ರಮ.
• ರಾಜ್ಯದಲ್ಲಿ ಬಡತನ ನಿವಾರಣೆಗಾಗಿ ಸಂಪೂರ್ಣ ಮದ್ಯ ನಿಷೇಧ.
• ಶಿಕ್ಷಣದ ಪ್ರತಿ ಹಂತದಲ್ಲಿಯೂ ಉಚಿತ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಕ್ರಮ.
• ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಕನಿಷ್ಠ ಒಂದು ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮತ್ತು ತಾಲ್ಲೂಕಿಗೊಂದು ಸರ್ಕಾರಿ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ.
• ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರ್ಥಿಕತೆ ನಿರ್ಮಾಣ, ಉದ್ಯೋಗಸೃಷ್ಟಿ. ಗ್ರಾಮಸ್ವರಾಜ್ಯ.
• ವೈಜ್ಞಾನಿಕ ಬೆಳೆ ಮತ್ತು ಬೆಲೆ ಪದ್ದತಿ ಜಾರಿ. ಕೃಷಿ ಉತ್ಪನ್ನಗಳಿಗೆ ಗ್ರಾಮೀಣ ಭಾಗದಲ್ಲಿಯೇ ಮೌಲ್ಯವರ್ಧನೆಗೆ ಕ್ರಮ, ಸಾಲಮುಕ್ತ ರೈತ; ಬಡತನಮುಕ್ತ ಹಳ್ಳಿಗಳು.
• ರಾಜ್ಯಾದ್ಯಂತ ಕೆರೆಗಳನ್ನು ತುಂಬಿಸಿ ಅಂತರ್ಜಲ ಮಟ್ಟ ಏರಿಸಲು ಕ್ರಮ.
• ರಾಜ್ಯದ ಪ್ರತಿ ಹಳ್ಳಿ/ಪಟ್ಟಣಕ್ಕೂ ಮಳೆ/ನದಿ ಮೂಲದ ಕುಡಿಯುವ ನೀರಿನ ವ್ಯವಸ್ಥೆ.
• ರಾಜ್ಯದ ಪ್ರತಿ ಕೆರೆ ಮತ್ತು ಬಂಜರು ಭೂಮಿಗಳಲ್ಲಿ ಗ್ರಾಮ ಪಂಚಾಯಿತಿ ಮಾಲೀಕತ್ವದಲ್ಲಿ ಸೌರವಿದ್ಯುತ್ ಘಟಕ ಸ್ಥಾಪನೆ. ಸ್ಥಳೀಯವಾಗಿ ಪರಿಸರಸ್ನೇಹಿ ವಿದ್ಯುತ್ ಉತ್ಪಾದನೆಗೆ ಮತ್ತು ಉದ್ಯೋಗಸೃಷ್ಟಿಗೆ ಆದ್ಯತೆ.
• ನ್ಯಾಯಾಂಗವೂ ಸೇರಿದಂತೆ ಆಡಳಿತದ ಎಲ್ಲಾ ಹಂತದಲ್ಲಿ ಕನ್ನಡಕ್ಕೆ ಪ್ರಥಮ ಪ್ರಾಶಸ್ತ್ಯ; ಕನ್ನಡ ಕಡ್ಡಾಯ.
• ಕರ್ನಾಟಕದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಪ್ರಾಥಮಿಕ ಆದ್ಯತೆ.
• ರಾಜ್ಯದ ನಿರುದ್ಯೋಗಿ ಪದವೀಧರರಿಗೆ ಕನಿಷ್ಠ 2000 ರೂಪಾಯಿ ಮಾಸಾಶನ; ನಿರುದ್ಯೋಗ ಭತ್ಯೆ.
• ಎಲ್ಲಾ ತರಹದ ಮಾಸಾಶನಗಳನ್ನು ಕನಿಷ್ಠ ರೂ.3000ಕ್ಕೆ ಏರಿಕೆ. ಈ ಸಂದರ್ಭದಲ್ಲಿ ಇಂಡಿ ವಿಧಾನಸಭಾ ಮತಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಅಶೋಕ ಜಾಧವ ತಾಲೂಕಾ ಅಧ್ಯಕ್ಷರು ಸುರೇಂದ್ರ ಕುಸನಾಳೆ, ಯುವಘಟಕ ಅಧ್ಯಕ್ಷರು ಭೀಮಾಶಂಕರ ಕಾಂಬಳೆ, ತಾಲೂಕಾ ರೈತ ಘಟಕ ಅಧ್ಯಕ್ಷರು ಈರಣ್ಣ ತೇಲಿ,
ಸಮಾಜ ಜಾಲತಾಣದಲ್ಲಿ ಉಪಾಧ್ಯಕ್ಷರು ಮಲ್ಲಿಕಾರ್ಜುನ ಬಿರಾದಾರ, ತಾಲೂಕಾ ಸಂಘಟನಾ ಕಾರ್ಯದರ್ಶಿ ಮುತ್ತುರಾಜ ಹೊನ್ನಗೊಂಡ,ತಿಕೋಟಾ ತಾಲೂಕಾ ಯುವಘಟಕ ಅಧ್ಯಕ್ಷರು ಲಕ್ಷ್ಮಣ ಚಡಚಣ, ಮತ್ತು ಮಸಳಿ ಗ್ರಾಮಘಟಕದ ಅಧ್ಯಕ್ಷರು ಉಮೇಶ್ ತಳವಾರ, ಮತ್ತು ಸುರೇಶ ನಿಂಬೋಣಿ ಹಾಗೂ ಎಲ್ಲ ಕೆ ಆರ್ ಎಸ್ ಪಕ್ಷದ ಸೈನಿಕರು ಮತ್ತಿತರು ಉಪಸ್ಥಿತರಿದ್ದರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button