ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನಟರಾಜ ವಿರುದ್ಧ – ಶಿಸ್ತು ಕ್ರಮಕ್ಕೆ ಶಾಸಕನ ಪುತ್ರ ಆಗ್ರಹ.
ಮಾನ್ವಿ ಅ.10

ಮಾನ್ವಿ ಸಮಾಜ ಕಲ್ಯಾಣ ಇಲಾಖೆಯ ತಾಲೂಕ ಅಧಿಕಾರಿ ನಟರಾಜ ವಸತಿ ನಿಲಯ ವಿದ್ಯಾರ್ಥಿಗಳಿಗೆ ಕಳಪೆ ಆಹಾರ ನೀಡುತ್ತಿರುವ ಬಗ್ಗೆ ಮಾಹಿತಿ ಬಂದಿದೆ ಎಂದು ಮಾನ್ವಿ ಶಾಸಕ ಹಂಪಯ್ಯ ನಾಯಕ ಪುತ್ರ ಶಿವರಾಜ ನಾಯಕ ವಕೀಲ ಗಂಭೀರವಾಗಿ ಆರೋಪಿಸಿದ್ದಾರೆ.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಶಾಸಕರ ಭವನದ ಮುಂದೆ ರೈತ ಸಂಘದ ಮುಖಂಡರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ, ಮಾನ್ವಿ ಸಮಾಜ ಕಲ್ಯಾಣ ಇಲಾಖೆಯ ತಾಲೂಕ ಅಧಿಕಾರಿ ನಟರಾಜ ಮತ್ತು ಪರಿಶಿಷ್ಟ ಪಂಗಡ ಇಲಾಖೆಯ ತಾಲೂಕ ಅಧಿಕಾರಿ ಮಹಾಲಿಂಗಪ್ಪ ಇಂಗಳದಾಳ ತಮ್ಮ ಸಂಬಂಧಿಕರ ವ್ಯಯಕ್ತಿಕ ಖಾತೆಗೆ ಅನುದಾಳ ಬಳಕೆ ಮಾಡಿ ಕೊಂಡಿರುವ ಮಾಹಿತಿ ಇದೆ ಎಂದು ಕಿಡಿಕಾರಿದರು.
ಮಾನ್ವಿ ಸಮಾಜ ಕಲ್ಯಾಣ ಇಲಾಖೆ ತಾಲೂಕ ಅಧಿಕಾರಿ ನಟರಾಜ ಮತ್ತು ಪರಿಶಿಷ್ಟ ಪಂಗಡ ಇಲಾಖೆಯ ತಾಲೂಕ ಅಧಿಕಾರಿ ಮಹಾಲಿಂಗಪ್ಪ ಇಂಗಳದಾಳ್ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿ ಶಾಸಕ ಹಂಪಯ್ಯ ನಾಯಕ ಮತ್ತು ಸಚಿವ ಬೋಸರಾಜು ಅವರಿಗೆ ಮಾಹಿತಿ ತಿಳಿಸಲಾಗುವುದು ಎಂದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಚಾನೆಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ

