ಅಂಜುಮನ್ ಖಿದ್ಮತೆ -ಇ -ಇಸ್ಲಾಮ್ (ರಿ)ವತಿಯಿಂದ ಬೃಹತ್ ಪ್ರತಿಭಟನೆ ರ್ಯಾಲಿಯನ್ನು ಈದ್ಗಾ ಮೈದಾನದಿಂದ ತಹಸಿಲ್ದಾರ್ ಕಚೇರಿವರೆಗೆ ತೆರಳಿ ಮನವಿ ಪತ್ರವನ್ನು ನೀಡಲಾಯಿತು
ಹೊಸಪೇಟೆ ಮಾರ್ಚ್28
2( ಬಿ) ಅಡಿಯಲ್ಲಿ ಮುಸ್ಲಿಂ ಸಮುದಾಯಕ್ಕಿದ್ದ ಮೀಸಲಾತಿಯನ್ನು ಪುನರ್ ಪರಿಶೀಲಿಸಬೇಕು.ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ದಿನಾಂಕ 24 ರಂದು ಸಂಪುಟ ಸಭೆಯಲ್ಲಿ ಮುಸ್ಲಿಂ ಸಮುದಾಯಕ್ಕಿದ್ದ 2(ಬಿ) ಮೀಸಲಾತಿಯನ್ನು ರದ್ದುಪಡಿಸಿದ್ದಾರೆ.


ಇದು ಅ ಸಂವಿಧಾನಿಕ ಹಾಗೂ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿಯಾಗಿದೆ.ಸಂವಿಧಾನದಲ್ಲಿ ಧರ್ಮಧಾರಿತ ಮೀಸಲಾತಿ ಇಲ್ಲದಿರುವದರಿಂದ 2( ಬಿ) ಪ್ರವರ್ಗದಡಿಯಲ್ಲಿ ಇತರೆ ಹಿಂದುಳಿದ ವರ್ಗಗಳಂತೆ ಕರ್ನಾಟಕದ ಮುಸ್ಲಿಂ ಸಮುದಾಯ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗವೆಂದು ವೈಜ್ಞಾನಿಕ ಅಧ್ಯಯನದ ಮೂಲಕ ಗುರುತಿಸಿ 2(ಬಿ) ಮೀಸಲಾತಿ ನೀಡಲಾಗಿತ್ತು. ಸ್ವಾತಂತ್ರ ನಂತರ ನಾಗನಗೌಡ ಸಮಿತಿ, ವೆಂಕಟಸ್ವಾಮಿ ಆಯೋಗ ಮತ್ತು 1990 ರಿ ಚಿನ್ನಪ್ಪ ರೆಡ್ಡಿ ಆಯೋಗ ಕೂಡ ಮುಸ್ಲಿಮರನ್ನು ಹಿಂದುಳಿದ ವರ್ಗಗಳಿಗೆ ಸೇರಿಸಿರುವುದನ್ನು ನಾವು ಕಾಣಬಹುದು. ವಾಸ್ತವಾಂಶ ಹೀಗಿದ್ದರೂ ಸಹ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ತಡೆಯೊಡುವ ಹಾಗೂ ಮುಖ್ಯ ವಾಹಿನಿಗೆ ಬರದಂತೆ ನೋಡಿಕೊಳ್ಳುವ ಷಡ್ಯಂತ್ರದ ಮುಂದುವರೆದ ಭಾಗವಾಗಿ 2(ಬಿ) ಮೀಸಲಾತಿ ರದ್ದು ಪಡಿಸಿರುವುದು ದೃಢವಾಗುತ್ತದೆ. ಸಂವಿಧಾನದ ಆಶಯಗಳಂತೆ ಸರ್ಕಾರ ತನ್ನ ಆಡಳಿತ ನಡೆಸಬೇಕೆ ಹೊರತು ತನ್ನ ಗುಪ್ತ ಅಜೆಂಡಗಳನ್ನು ಜಾರಿಗೊಳಿಸಲು ಅಲ್ಲ ಈ ನಿಟ್ಟಿನಲ್ಲಿ ಚುನಾವಣೆ ಸಂದರ್ಭದಲ್ಲಿ ಈ ಬಾರಿ ಬಿಜೆಪಿ ಸರ್ಕಾರವನ್ನು ಅನುಭವಿಸುತ್ತದೆ ಎಂದು ಹೇಳಿದರು ಮುಸ್ಲಿಂ ಸಮಾಜದ ಮುಖಂಡರು, ಕಾರ್ಯದರ್ಶಿಗಳು ಸದಸ್ಯರು ಸಹಸ್ರಾರು ಜನಸಂಖ್ಯೆ ಜಮಾವಣೆಗೊಂಡ ಆಕ್ರೋಶ ವ್ಯಕ್ತಪಡಿಸಿದರುತಾಲೂಕ ವರದಿಗಾರರು : ಮಾಲತೇಶ್ ಶೆಟ್ಟರ್. ಹೊಸಪೇಟೆ