ಕೊಟ್ಟೂರಿನಲ್ಲಿ ಸಂಯುಕ್ತ ಹೋರಾಟ – ಸಂಘಟನೆಗಳ ಕರೆ.

ಕೊಟ್ಟೂರು ಫೆಬ್ರುವರಿ.16

“2024 ರ ಲೋಕಸಭಾ ಚುನಾವಣೆಗಳು ಮತ್ತೆ ಪ್ರಾರಂಭವಾಗುತ್ತಿದೆ. NDA ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 10 ವರ್ಷಗಳಾಗಿವೆ. ಚುನಾವಣೆಗೂ ಮೊದಲು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಿದಂತೆ 2 ಕೋಟಿ ಉದ್ಯೋಗದ ಸೃಷ್ಟಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಡಾ.ಸ್ವಾಮಿನಾಥನ್ ರವರ ಶಿಫಾರಸ್ಸಿನಂತೆ ಬೆಂಬಲ ಬೆಲೆಯ ಕಾನೂನು ರಚಿಸುವುದಾಗಿ ತಿಳಿಸಿದ್ದೀರಿ.. ಎಂದು ಸಿಪಿಐಎಂಎಲ್ ಲಿಬರೇಷನ್ ಪಕ್ಷದ ತಾಲೂಕು ಕಾರ್ಯದರ್ಶಿ ಜಿ ಮಲ್ಲಿಕಾರ್ಜುನ್ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದರು”.ಪಟ್ಟಣದ ಗಾಂಧೀ ಸರ್ಕಲ್ ನಿಂದ ಕೇಂದ್ರ ಸರ್ಕಾರದ ವಿರುದ್ಧ ಸಂಯುಕ್ತ ಹೋರಾಟ-  ಸಂಘಟನೆಗಳು ಸಿಪಿಎಂಎಲ್, ಭಾರತೀಯ ಕಿಸಾನ್ ಸಭಾ, ಶುಕ್ರವಾರ ರಂದು ದೇಶಾದ್ಯಂತ ಹಿನ್ನೆಲೆಯಲ್ಲಿ ಕರೆ ನೀಡಿದರು.ಕಿಸಾನ್ ಸಭಾದ ಕೆಂಪು ಬಾವುಟಗಳನ್ನು ಕೈಯಲ್ಲಿ ಹಿಡಿದು ಬಸ್ ಸ್ಟ್ಯಾಂಡ್ ಹತ್ತಿರ ಸರ್ಕಲ್ ನವರೆಗೂ  ಸಂಯುಕ್ತ ಹೋರಾಟ-  ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಮತ್ತು ಬೇಡಿಕೆಗಳೊಂದಿಗೆ  ಸಂಘಟನೆಗಳು ಸ್ಥಳಕ್ಕೆ  ಬಂದಿರುವ ತಾಲೂಕು ಉಪ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.ನಂತರ ಮಾತನಾಡಿದ  ‘ಸಬ್‌ಕಾ ಸಾಥ್’ ಎಂದು ಜನಸಾಮಾನ್ಯರ ಕೊಂಡುಕೊಳ್ಳುವ ಸಾಮಾರ್ಥ್ಯವನ್ನು ಕುಗ್ಗಿಸಿ, ಆಹಾರ, ಆರೋಗ್ಯ ಮತ್ತು ಶಿಕ್ಷಣಕ್ಕಾಗಿ ಅನುದಾನಗಳನ್ನು ಹೆಚ್ಚಳ ಮಾಡುವ ಬದಲಿಗೆ ಅನುದಾನ ಕಡಿತ ಮಾಡಿ ಆರೋಗ್ಯ ಮತ್ತು ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗೀಕರಿಸಿ, ಜನರಿಗೆ 2700 ಕ್ಯಾಲೋರಿ ಆಹಾರ ಪ್ರತಿದಿನ ಸಿಗದ ಪರಿಣಾಮ ಇಂದು ಭಾರತ ಹಸಿವಿನ ಸೂಚ್ಯಾಂಕದಲ್ಲಿ 111ನೇ ಸ್ಥಾನಕ್ಕೆ ಕುಸಿದಿದೆ.ಆರ್ಥಿಕ ಬಿಕ್ಕಟ್ಟನ್ನು ಕರೋನಾ ಮುಂಚಿತವಾಗಿದ್ದ ಬೆಳವಣಿಗೆಗೆ ಹೋಲಿಸದೇ ಕರೋನಾ ನಂತರದ ಬೆಳವಣಿಗೆಗೆ ಹೋಲಿಸಿ ಆರ್ಥಿಕ ಬಿಕ್ಕಟ್ಟು ಸುಧಾರಿಸಿದೆ ಎಂದು ಹೇಳಲಾಗುತ್ತಿದೆ. ಆರ್ಥಿಕ ಬಿಕ್ಕಟ್ಟು ಸುಧಾರಿಸಿದ್ದರೆ ಕಾರ್ಮಿಕ ಕಾನೂನುಗಳ ತಿದ್ದುಪಡಿ ಮಾಡಿ ಮುಷ್ಕರದ ಹಕ್ಕು ಮತ್ತು ಸಾಮೂಹಿಕ ಚೌಕಾಸಿಯ ಹಕ್ಕನ್ನು ಏಕೆ ಕಸಿಯಲಾಗುತ್ತಿದೆ. 5 ಟ್ರಿಲಿಯನ್ ಆರ್ಥಿಕತೆಯನ್ನು ಸಾಧಿಸುವ ಭಾರತದಲ್ಲಿ 42.3% ನಿರುದ್ಯೋಗ ಏಕೆ? ಬಂಡವಾಳ ಹೂಡಿಕೆಯಾಗುತ್ತಿದೆ ಎಂದು ಪ್ರತಿಪಾದನೆ ಮಾಡುವ ಸರ್ಕಾರ 100ಕ್ಕೆ 60% ಗುತ್ತಿಗೆ-ಹೊರಗುತ್ತಿಗೆಯ ಹುದ್ದೆಗಳನ್ನು ಏಕೆ ಸೃಷ್ಟಿಸಲಾಗುತ್ತಿದೆ? ನಿಮ್ಮ ಈ ಆರ್ಥಿಕ ನೀತಿಗಳಿಂದ ಬಡವರ ಭಾರತ ಮತ್ತು ಶ್ರೀಮಂತರ ಭಾರತವನ್ನು ಸೃಷ್ಟಿಸಿ ದೊಡ್ಡ ಪ್ರಮಾಣದ ಆರ್ಥಿಕ ಅಸಮಾನತೆಯ ಕಂದಕವನ್ನು ಸೃಷ್ಟಿಸಿರುವುದು ಸಬ್ ಕಾ ವಿಕಾಸ್ ಎನ್ನುವುದು ಘೋಷಣೆಯಲ್ಲವೇ? ಎಂದು ಸಿಪಿಐಎಂಎಲ್ ಲಿಬರೇಷನ್ ಪಕ್ಷದ ತಾಲೂಕು ಕಾರ್ಯದರ್ಶಿ ಜಿ ಮಲ್ಲಿಕಾರ್ಜುನ್ ಹೇಳಿದರು.

ಮಾತನಾಡಿದ ಭಾರತವನ್ನು ಕಟ್ಟಿರುವ ಸಾರ್ವಜನಿಕ ಕೈಗಾರಿಕೆಗಳನ್ನು ಖಾಸಗೀಕರಿಸಿದ್ದಲ್ಲದೇ ಸರ್ಕಾರದ ಆಸ್ತಿಯನ್ನು NMP ಯ ಮುಖಾಂತರ ಖಾಸಗೀಯವರಿಗೆ ದಾನ ಮಾಡಿದರೆ ಭಾರತದ ಆರ್ಥಿಕ ಸಾರ್ವಭೌಮತೆಯನ್ನು ಕಾಪಾಡಲು ಸಾಧ್ಯವಿದೆಯಾ? ಗರಿಷ್ಠ ಆಡಳಿತ ಕನಿಷ್ಠ ಸರ್ಕಾರ ಎಂದರೆ ಸಾರ್ವಜನಿಕ ಒಡೆತನವನ್ನು ಖಾಸಗಿ ವೈಕ್ತಿಗಳಿಗೆ ಅಡಮಾನ ಇಡುವುದೇ? ಎಂದು ಸಿಪಿಐ ಎಂಎಲ್ ಜಿಲ್ಲಾ ಸಮಿತಿಯ ಸದಸ್ಯ ಅಜ್ಜಪ್ಪ ಹೇಳಿದರುಮಾತನಾಡಿದ ದೇಶಕ್ಕೆ ಅನ್ನ ನೀಡುವ ರೈತ ಬೆಳೆದ ಬೆಳೆಗಳಿಗೆ ಡಾ. ಸ್ವಾಮಿನಾಥನ್ ಶಿಫಾರಸ್ಸಿನಂತೆ ಬೆಂಬಲ ಬೆಲೆಗೆ ಕಾನೂನು ತರುವ ಬದಲು ರೈತನನ್ನು ಬಲಿ ತೆಗೆದು ಕೊಳ್ಳುವ ನೀತಿ ಸರಿಯೇ?ಕೋಮುಭಾವನೆಗಳನ್ನು ಪ್ರಚೋದನೆಗೊಳಿಸಿ ಜನರನ್ನು ಧಾರ್ಮಿಕವಾಗಿ ಕಿತ್ತಾಡಲು ಬೇಕಾದ ವಿಷಮ ವಾತಾವರಣವನ್ನು ಸೃಷ್ಟಿಸುವುದು ಸಬ್ ಕಾ ವಿಶ್ವಾಸ್ ಎಂದಾರಾಗುತ್ತದೆಯೇ.ಆದ್ದರಿಂದ ಸರ್ಕಾರ ಸಂಪೂರ್ಣವಾಗಿ ತನ್ನ ನೀತಿಗಳನ್ನು ಬದಲಾಯಿಸಬೇಕೆಂದೂ ಒತ್ತಾಯಿಸಿ ದೇಶದ ಎಲ್ಲಾ ರೈತರು. ಕೂಲಿಕಾರರು, ಕಾರ್ಮಿಕರು ಒಂದಾಗಿ ಚಳುವಳಿ ನಡೆಸುತ್ತಿದ್ದಾರೆ. ಇಂತಹ ಚಳುವಳಿಗಳ ಮೇಲೆ ದೆಹಲಿಯಲ್ಲಿ ಪೊಲೀಸ್ ದಬ್ಬಾಳಿಕೆ ಮಾಡಿರುವುದನ್ನು ಖಂಡಿಸಿದರು.ಕಿಸಾನ್ ಸಭಾದ ತಾಲೂಕು ಕಾರ್ಯದರ್ಶಿ ಕೆ ರೇಣುಕಮ್ಮ ಹೇಳಿದರು.ಈ ಸಂದರ್ಭದಲ್ಲಿ ಸಿಪಿಎಂಎಲ್ ಲಿಬರೇಷನ್ ಪಕ್ಷದ ತಾಲೂಕು ಕಾರ್ಯದರ್ಶಿ ಜಿ ಮಲ್ಲಿಕಾರ್ಜುನ್, ಭಾರತೀಯ ಕಿಸಾನ್ ಸಭಾ ದ ತಾಲೂಕು ಕಾರ್ಯದರ್ಶಿ ಕೆ ರೇಣುಕಮ್ಮ, ಬದ್ದಿ ರೇಣುಕಮ್ಮ,ಅಂಬಳಿ ಕಳಾಚಾರಿ, ಕೆ ಕೊಟ್ರೇಶ್,ಡಿಎಸ್ಎಸ್ ಅಧ್ಯಕ್ಷ ಪಿ ಚಂದ್ರಶೇಖರ್, ಮುಸ್ಲಿಂ ಸಂಘದ ತಾಲೂಕು ಅಧ್ಯಕ್ಷ ನೂರ್ ಹಮದ್, ಕಂದಗಲ್ ಘಟಕದ ಅಧ್ಯಕ್ಷ ತಿಮ್ಮಣ್ಣ, ಅಜ್ಜಣ್ಣ, ಕೆಂಚಪ್ಪ, ಚಿಕ್ಕಪ್ಪ, ಗುಡುದಯ್ಯ, ತೂಲಹಳ್ಳಿ ಲೋಕೇಶ್, ಸಿರುಗುಪ್ಪದ ಅನಿಲ್, ಕಾಸಿಂ, ಸುವೇಬ್ ಕೆ, ಜಿಲಾನ್, ಇನ್ನು ಪ್ರಮುಖ ಕಾರ್ಯಕರ್ತರಿದ್ದರು.

ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಪ್ರದೀಪ್.ಕುಮಾರ್.ಸಿ.ಕೊಟ್ಟೂರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button