ಎಲ್ಲರೂ ಮತದಾನದಲ್ಲಿ ಭಾಗವಹಿಸಲು ಕರೆ
ತರೀಕೆರೆ ಏಪ್ರಿಲ್:07
ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ, 126 ತರೀಕೆರೆ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ, ವಯೋ ವೃದ್ಧರಿಗೆ ಮತದಾನ ಮಾಡಲು ವಿಶೇಷ ಸೌಲಭ್ಯ ಒದಗಿಸಲಾಗಿದೆ ಎಂದು ಸ್ವಿಫ್ ಸಮಿತಿ ಅಧ್ಯಕ್ಷರಾದ ಹಾಗೂ ತಾಲೂಕು ಕಾರ್ಯ ನಿರ್ವಹಣಾ ಗೀತಾ ಶಂಕರ್ ಎಸ್ ರವರು ಇಂದು ತರೀಕೆರೆ ಎಪಿಎಂಸಿ ಯಾರ್ಡ್ ನಲ್ಲಿ ಮತದಾರರಿಗೆ ಅರಿವು ಮತ್ತು ಜಾಗೃತಿ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಬೈಕ್ ಜಾಥಾವನ್ನು ಉದ್ಘಾಟನೆ ಮಾಡಿ ಹೇಳಿದರು.
ನಂತರ ಎಲ್ಲರಿಗೂ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು. ವಿಕಲಚೇತನರು ಮತಗಟ್ಟೆಗೆ ಬಂದು ಮತದಾನ ಮಾಡಬೇಕು. ಈ ಕುರಿತು ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲರೂ ಮತದಾನ ಮಾಡಲು ಅರಿವು ಮೂಡಿಸಬೇಕು, ಎಫ್ ಎಸ್ ಟಿ ಮತ್ತು ಎಸ್ ಎಸ್ ಟಿ, ತಂಡಗಳು ಸಕ್ರೀಯವಾಗಿ ಕಾರ್ಯಪ್ರವೃತ್ತರಾಗಬೇಕು ಎಂದರು. ಜಾಥಾದಲ್ಲಿ ಅಂಗನವಾಡಿ ಕಾರ್ಯಕರ್ತರು, ವಿಕಲಚೇತನರು, ಅಕ್ರಮ್ ಪಾಷಾ ಭಾಗವಹಿಸಿ, ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಸೆಕ್ಟರ್ ಆಫೀಸರ್ ಆದ ಎಪಿಎಂಸಿ ಕಾರ್ಯದರ್ಶಿ ಮೋಹನ್ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ಲಾಸ್ಟರ್ ಅಧಿಕಾರಿಯಾದ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಗಣೇಶ್ ರವರು ಸ್ವಾಗತಿಸಿದರು, ಸೆಕ್ಟರ್ ಆಫೀಸರ್ ಆದ ಪುರಸಭಾ ಮುಖ್ಯ ಅಧಿಕಾರಿ ಹೆಚ್ ಮಾಂತೇಶ್ ವಂದಿಸಿದರು.
ಜಿಲ್ಲಾ ವರದಿಗಾರರು:ಎನ್ ವೆಂಕಟೇಶ್.ತರೀಕೆರೆ