ದೋರನಾಳು ಪರಮೇಶ್ ಗೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹ
ತರೀಕೆರೆ ಏ.8
ವೀರಶೈವ ಸಮಾಜದವರು ತರೀಕೆರೆ ಕ್ಷೇತ್ರದಲ್ಲಿ ಹೆಚ್ಚಾಗಿರುವುದರಿಂದ ಈ ಬಾರಿ ದೋರನಾಳು ಪರಮೇಶ್ ಅವರಿಗೆ ಟಿಕೆಟ್ ಕೊಟ್ಟರೆ 30,000 ಮತಗಳ ಅಂತರದಲ್ಲಿ ಗೆಲ್ಲಿಸುತ್ತೇವೆ,ಎಂದು ಕಾಂಗ್ರೆಸ್ ಕಿಸಾನ್ ಘಟಕದ ಅಜ್ಜಂಪುರ ತಾಲೂಕು ಅಧ್ಯಕ್ಷರಾದ ಸಿದ್ದನಗೌಡ ಚನ್ನಾಪುರ ರವರು ಇಂದು ತರೀಕೆರೆ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರು ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. ತಗ್ಗಿನ ಹಳ್ಳಿ ಚಂದ್ರಪ್ಪ ಮಾತನಾಡಿ ಪರಮೇಶ್ ರವರು 15 ವರ್ಷಗಳಿಂದಲೂ ಪಕ್ಷದಲ್ಲಿ ಯಾವುದೇ ವಿರೋಧ ಚಟುವಟಿಕೆ ಮಾಡದೆ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ,
ಆದ್ದರಿಂದ ಪಕ್ಷದ ವರಿಷ್ಠರು ಟಿಕೆಟ್ ನೀಡಬೇಕೆಂದು ಆಗ್ರಹಿಸಿದರು. ದೊರನಾಳು ಗ್ರಾಮ ಪಂಚಾಯಿತಿಯ ಸದಸ್ಯರಾದ ಬೈರಾಪುರದ ಕರುಣಾ ರವರು ಮಾತನಾಡಿ ರಾಜ್ಯದಲ್ಲಿ 70 ಪರ್ಸೆಂಟ್ ಲಿಂಗಾಯಿತರು ಕಾಂಗ್ರೆಸ್ ಕಡೆ ವಾಲುತ್ತಿದ್ದಾರೆ ವೀರಶೈವ ಲಿಂಗಾಯಿತ ಸಮುದಾಯಕ್ಕೆ ಸೇರಿದ ಪರಮೇಶ್ ರವರಿಗೆ ಅವಕಾಶ ಕೊಟ್ಟರೆ ಕಾಂಗ್ರೆಸ್ ಗೆಲುವು ಖಚಿತ ಎಂದು ಹೇಳಿದರು. ವೀರಶೈವ ಸಮಾಜದ ಮುಖಂಡರಾದ ಚನ್ನಾಪುರದ ನಾಗಭೂಷಣ್ ಮಾತನಾಡಿ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರವರು ವಿಪಕ್ಷ ನಾಯಕ ಸಿದ್ದರಾಮಯ್ಯರವರು ಹೊಸಬರಿಗೆ ಅವಕಾಶ ಮಾಡಿಕೊಡುವ ಮೂಲಕ ಪರಮೇಶ್ವರ್ ಅವರಿಗೆ ಟಿಕೆಟ್ ಕೊಡಬೇಕೆಂದು ಹೇಳಿದರು. ಪ್ರತಿಭಟನೆಯ ನೇತೃತ್ವವನ್ನು ಡಿಆರ್ ಸುನಿಲ್,ಅನ್ವರ್ ಭಾಷಾ,ಚೆನ್ನಬಸಪ್ಪ ಮುಂತಾದವರ ನೇತೃತ್ವದಲ್ಲಿ ನೂರಾರು ಜನ ಅಭಿಮಾನಿಗಳು ಪ್ರತಿಭಟನೆ ಮಾಡಿ ಘೋಷಣೆಗಳನ್ನು ಕೂಗಿದರು.
ಜಿಲ್ಲಾ ವರದಿಗಾರರು:ಎನ್ ವೆಂಕಟೇಶ್.ತರೀಕೆರೆ