ಭ್ರಷ್ಟಾಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮತದಾರರಿಂದ ತಿರಸ್ಕಾರ
ತರೀಕೆರೆ ಏ.8
ಶಿಕ್ಷಣ ಆರೋಗ್ಯ ಮತ್ತು ಉದ್ಯೋಗ ನೀಡುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ, ಎಂದು ಲೋಕೇಶ್ ತಾಳಿಕಟ್ಟೆ ಇಂದು ಪಟ್ಟಣದ ಹೋಟೆಲ್ ಅರಮನೆ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಜನರಿಗೆ ಮೂಲಭೂತ ಸೌಕರ್ಯ ಕೊಡುವಲ್ಲಿ ಮತ್ತು ಆಡಳಿತವು ಭ್ರಷ್ಟಾಚಾರದಲ್ಲಿ ತೊಡಗಿರುವುದರಿಂದ ಜನರ, ಸಮಸ್ಯೆಗಳಿಗೆ ಸ್ಪಂದಿಸದೆ ಮೂಲಭೂತ ಸೌಕರ್ಯಗಳನ್ನು ನೀಡುವ ಬದಲು ಜನರ ಮನಸ್ಸಿನಲ್ಲಿ ಕೋಮು ದ್ವೇಷ ಬಿತ್ತುತಿದೆ ಆದ್ದರಿಂದ ತರೀಕೆರೆಯ ಜನರು ಈ ಬಾರಿ ಬಿಜೆಪಿಯನ್ನು ತಿರಸ್ಕರಿಸಲು ನಿರ್ಧರಿಸಿದ್ದಾರೆ ಎಂದು ಹೇಳಿದರು. ನಮ್ಮದು ಜಾತ್ಯಾತೀತ ಪಕ್ಷವೆಂದು ಸುಳ್ಳು ಹೇಳಿಕೊಂಡು ಕುಟುಂಬ ರಾಜಕಾರಣದಲ್ಲಿ ನಿರಂತರಾಗಿರುವ ಜೆ ಡಿ ಎಸ್ ಗೆ ಜನರ ಬೆಂಬಲ ಇಲ್ಲದಂತಾಗಿದೆ.
ಸಮ ಸಮಾಜದ ತತ್ವದ ಅಡಿಯಲ್ಲಿ ಜಾತ್ಯಾತೀತ ವಾಗಿ ಸಾಗುತ್ತಿರುವ ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಮತ್ತು ಈ ಚುನಾವಣೆಯಲ್ಲಿ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದೇನೆ. ಕಳೆದ ನಾಲ್ಕು ವರ್ಷದಿಂದ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಬಯಲಿಗೆಳೆದು, ರಾಜ್ಯದ ಶಿಕ್ಷಣ ಇಲಾಖೆಯಲ್ಲಿರುವ ಅವ್ಯವಸ್ಥೆಗಳನ್ನು, ಹಲವಾರು ವೇದಿಕೆಗಳಲ್ಲಿ ಚರ್ಚಿಸುವಂತೆ ಮಾಡಿ ಅದರಲ್ಲಿದ್ದ ಅನೇಕ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕಾರಣನಾಗಿರುವ ನನ್ನನ್ನು ಗುರುತಿಸಿ ಟಿಕೆಟ್ ನೀಡಿದರೆ ಪಕ್ಷದ ಸಿದ್ಧಾಂತದ ಅಡಿಯಲ್ಲಿ ತರೀಕೆರೆ ಜನತೆಯ ಸೇವೆ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಒಂದು ವೇಳೆ ಟಿಕೆಟ್ ಕೊಡದಿದ್ದರೆ ಸೈದ್ದಾಂತಿಕವಾಗಿ ಪಕ್ಷವನ್ನು ಗಟ್ಟಿಯಾಗಿ ಕಟ್ಟಲು ಸಿದ್ದನಾಗಿರುತ್ತೇನೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಮಾಜಿ ಪುರಸಭಾ ಸದಸ್ಯ ಈರಣ್ಣ, ಕುರುಬ ಸಮಾಜದ ಮುಖಂಡರಾದ ಹಾಲು ವಜ್ರಪ್ಪ, ದೇವರಾಜು, ಶಿವಣ್ಣ, ಸೋಮಶೇಖರ್, ಟಿಡಿ ದೇವರಾಜ್ ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು:ಎನ್ ವೆಂಕಟೇಶ್.ತರೀಕೆರೆ