ಪಟ್ಟಣದಲ್ಲಿ ದಲಿತ ಸಂಘರ್ಷ ಸಮಿತಿಯ – ಮುಖಂಡರ ಸಭೆ.
ಮಾನ್ವಿ ಮಾ.08

ರಾಯಚೂರು ನಗರದಲ್ಲಿ ಮಾರ್ಚ್ 15 ರಂದು ನವ ಕರ್ನಾಟಕ ನಿರ್ಮಾಣ ಆಂದೋಲನ ಹಾಗೂ ಜನರ ನಡುವೆ ಜನತಾ ಪ್ರಣಾಳಿಕೆ ಚರ್ಚೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಯಶಸ್ವಿ ಗೊಳಿಸ ಬೇಕು ಎಂದು ದಲಿತ ಸಂಘರ್ಷ ಸಮಿತಿ ಎನ್.ಮೂರ್ತಿ ಬಣದ ಮಾನ್ವಿ ತಾಲೂಕ ಅಧ್ಯಕ್ಷ ಮಾರೆಪ್ಪ ಮಳ್ಳಿ ತಿಳಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡರ ಸಭೆ ನಡೆಸಿ ಮಾತನಾಡಿ, ರಿಪಬ್ಲಿಕ್ ಪಾರ್ಟಿಯಿಂದ ಅವಕಾಶ ಇದೆ. ಹೀಗಾಗಿ ಪಕ್ಷಕ್ಕೆ ದುಡಿಯುವ ಕೆಲಸ ಮಾಡಬೇಕು ಎಂದರು.ರಾಯಚೂರು ನಗರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಗ್ರಾಮೀಣ ಭಾಗದ ಜನರು ಹೆಚ್ಚಿನ ಪ್ರಮಾಣದಲ್ಲಿ ಬರುವ ಮೂಲಕ ನಾಯಕರನ್ನು ಅದ್ಧೂರಿಯಾಗಿ ಆಹ್ವಾನಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿಮಾನ್ವಿ