ಸ್ವೀಪ್ ಸಮಿತಿ ಸಹಯೋಗದಿಂದ ಮತದಾನ ಜಾಗೃತಿಗಾಗಿ ವಿಕಲಚೇತನರಿಂದ ಬೈಕ್ ರ್ಯಾಲಿ
ಕೊಟ್ಟೂರು ಏ.18
ಕೊಟ್ಟೂರು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ, ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ಮತದಾನ ಅಭಿಯಾನದ ಅಂಗವಾಗಿ ಪಟ್ಟಣದಲ್ಲಿ ಮಂಗಳವಾರ ವಿಕಲಚೇತನರಿಂದ ಬೈಕ್ ರ್ಯಾಲಿ ನಡೆಸಲಾಯಿತು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ನಸುರುಲ್ಲಾ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಮತದಾನ ಮಾಡುವುದು ಪ್ರತಿಯೊಬ್ಬ ಮತದಾರನ ಆದ್ಯ ಕರ್ತವ್ಯವಾಗಿದೆ. ಮತದಾನದ ದಿನದಂದು ತಪ್ಪದೇ ಮತ ಚಲಾಯಿಸಬೇಕು. ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯಬಾರದು. ದೇಶದ ಉಜ್ವಲ ಭವಿಷ್ಯಕ್ಕಾಗಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಹೇಳಿದರು.
ಜಾಥಾದಲ್ಲಿ ಮತದಾನದ ಮಹತ್ವ ಕುರಿತು ಘೋಷಣೆಗಳನ್ನು ಕೂಗುತ್ತಾ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ತಾಲೂಕು ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಮೈದೂರು ಶಶಿಧರ್, ಪೌರಕಾರ್ಮಿಕರು. ತಾಲೂಕು ಆಡಳಿತ ಕಚೇರಿಯ ಸಿಬ್ಬಂದಿ, ತಾಲೂಕು ಪಂಚಾಯಿತಿ ಸಿಬ್ಬಂದಿ ಪಾಲ್ಗೊಂಡಿದ್ದರು.
ತಾಲೂಕ ವರದಿಗಾರರು:ಪ್ರಧಿಪ್ ಕುಮಾರ್.ಕೊಟ್ಟೂರು