ಕಾಂಗ್ರೆಸ್ ಪಕ್ಷದಿಂದ ಜಿ.ಎಚ್.ಶ್ರೀನಿವಾಸ್ ನಾಮಪತ್ರ ಸಲ್ಲಿಕೆ
ತರೀಕೆರೆ ಏ.19

ಪಕ್ಷದ ಹಿರಿಯ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರವರು ತುಂಬಾ ಭರವಸೆ ಇಟ್ಟು ನನಗೆ ಟಿಕೆಟ್ ಕೊಟ್ಟಿದ್ದಾರೆ ಎಂದು ಮಾಜಿ ಶಾಸಕ ಜಿ ಎಚ್ ಶ್ರೀನಿವಾಸ್ ನಾಮಪತ್ರ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ನಾನು ಶಾಸಕನಾಗಿದ್ದಾಗ ತರೀಕೆರೆ ತಾಲೂಕು ಎಲ್ಲ ಜಾತಿ ಸಮಾಜದವರ ಅಭಿವೃದ್ಧಿಗೆ ಶ್ರಮಿಸಿರುತ್ತೇನೆ. ನಾನು ಮಾಡಿದ ಅಭಿವೃದ್ಧಿ ಕೆಲಸಗಳಿಂದಲೇ ಜನರ ಪ್ರೀತಿ ವಿಶ್ವಾಸಗಳಿಸಿದ್ದೇನೆ. ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳೆಲ್ಲರ ವಿಶ್ವಾಸ ಪಡೆದುಕೊಂಡು ಮತಯಾಚನೆ ಮಾಡುತ್ತೇನೆ ಎಂದು ಹೇಳಿದರು. ತರೀಕೆರೆ ಚುನಾವಣಾ ಅಧಿಕಾರಿ ಸಿದ್ದಲಿಂಗ ರೆಡ್ಡಿರವರಿಗೆ ನಾಮಪತ್ರ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಡಾ. ಅಂಶುಮತ್ ಮಾಜಿ ವಿಧಾನ ಪರಿಷತ್ ಸದಸ್ಯರಾದ ಗಾಯತ್ರಿ ಶಾಂತಿ ಗೌಡ, ಕೆಪಿಸಿಸಿ ಸದಸ್ಯರಾದ ಎಚ್ ವಿಶ್ವನಾಥ್, ತರೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಯು ಫಾರೂಕ್, ಹಾಗೂ ಸುಮಾರು ಹದಿನೈದು ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ