ಮಕ್ಕಳಿಂದ ಮತದಾನ ಜಾಗೃತಿ ಅಭಿಯಾನ
ನಾಗಠಾಣ ಏ.20

ವಿಜಯಪುರ ನಿಮ್ಮ ಮತ ನಿಮ್ಮ ಹಕ್ಕು, ಜಾಗೃತ ಮತದಾರ ಸದೃಢ ಪ್ರಜಾಪ್ರಭುತ್ವ, ನಿಮ್ಮ ಮತ ಗೌಪ್ಯವಾಗಿರಲಿ, ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ, ಮುಕ್ತ-ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಸಹಕರಿಸಿ, ಚುನಾವಣೆ ಪ್ರಜಾಪ್ರಭುತ್ವದ ಭದ್ರ ಬುನಾದಿ,ಮತದಾರರ ಪಟ್ಟಿಯಲ್ಲಿ ಹೆಸರಿರುವುದನ್ನು ಖಚಿತ ಪಡಿಸಿಕೊಂಡು ಮತದಾನ ಮಾಡಿ’ ಎಂಬ ವಿವಿಧ ಘೋಷ ವಾಕ್ಯಗಳ ನಾಮಫಲಕಗಳನ್ನು ತಾಲೂಕಿನ ನಾಗಠಾಣ ಗ್ರಾಮದ ಅನುಶ್ರೀ,ಶ್ರೀನಿಧಿ,ಆರುಷಿ ಬಂಡೆ ಅವರು ಪ್ರದರ್ಶಿಸಿ ಮತದಾನ ಜಾಗೃತಿ ಮೂಡಿಸಿದರು.
ಜಿಲ್ಲಾ ವರದಿಗಾರರು:ಬೀ.ಎಸ್.ಹೊಸೂರ್.ವಿಜಯಪುರ