ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ
ಹುನಗುಂದ: ಉತ್ತಮ ಶಿಕ್ಷ ಣ ಪಡೆದರೆ ಸಮಾಜದ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾನಭಿವೃದ್ಧಿ ತಾಲೂಕು ಯೋಜನಾಧಿಕಾರಿ ಸಂತೋಷ ಅಭಿಪ್ರಾಯಪಟ್ಟರು.

ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾನಭಿವೃದ್ಧಿ ಯೋಜನಾ ಕಚೇರಿಯಲ್ಲಿ ನಡೆದ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಆರ್ಥಿಕ ಸಮಸ್ಯೆ ಇತರೆ ಕಾರಣಗಳಿಗೆ ಸಂಸ್ಥೆ ವತಿಯಿಂದ ಯೋಜನೆಯ ಪಾಲುದಾರ ಕುಟುಂಬದ ಮಕ್ಕಳ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷ ಣಕ್ಕೆ ಅನುಕೂಲವಾಗುವಂತೆ ಸುಜ್ಞಾನನಿಧಿ ಶಿಷ್ಯವೇತನ ನೀಡಲಾಗುತ್ತಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಸೌಲಭ್ಯದ ಸದುಪಯೋಗ ಪಡೆದು ನೌಕರಿ ಪಡೆದು, ನಂತರದಲ್ಲಿ ತಮ್ಮಂತೆ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ನೆರವಾಗಬೇಕು ಎಂದು ಸಲಹೆ ನೀಡಿದರು.
ಹಣಕಾಸು ಪ್ರಬಂಧಕರು ದ್ರಾಕ್ಷಾಯಣಿ ಅವರು ಮತ್ತು ಆಡಳಿತ ಸಹಾಯಕ ಪ್ರಬಂಧಕರಾದ ಕೆ ವಿಜಯ್ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಿಸಿದರು. ವಿದ್ಯಾರ್ಥಿಗಳು ಮತ್ತು ಪೋಷಕರು ಹಾಜರಿದ್ದರು.