ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗೆ ಕಾಂಗ್ರೆಸ್ ಬೆಂಬಲಿಸಿ – ಮಲ್ಲಿಕಾರ್ಜುನ ಖರ್ಗೆ …
ತರೀಕೆರೆ ( ಏ.24 ) :
ಬಾಬಾ ಸಾಹೇಬ್ ಡಾ. ಬಿಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿಕೊಂಡು ಹೋಗಬೇಕೆಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರು ಇಂದು ಪಟ್ಟಣದ ಬಯಲು ರಂಗಮಂದಿರದಲ್ಲಿ ಬ್ಲಾಕ್ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ವಿಧಾನಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು. 2023ರ ಈ ಮಹತ್ವದ ಚುನಾವಣೆ ದೇಶದ ರಾಜಕೀಯವನ್ನು ಬದಲಾಯಿಸುವ ಚುನಾವಣೆಯಾಗಿದೆ. ದೇಶದ ಸಂವಿಧಾನ ರಕ್ಷಣೆ ಮತ್ತು ಮೂಲಭೂತ ಹಕ್ಕುಗಳು ಉಳಿಯಬೇಕು, ಇಂದು ಬಿಜೆಪಿ ಸರ್ಕಾರದಿಂದ ಪ್ರಜಾಪ್ರಭುತ್ವದ ಮೇಲೆ ಪೆಟ್ಟು ಬೀಳುತ್ತಿದೆ ಸಂವಿಧಾನದ ಮೇಲೆ ಪೆಟ್ಟು ಬೀಳುತ್ತಿದೆ ಇದರ ರಕ್ಷಣೆಗಾಗಿ ಹೋರಾಟ ಮಾಡಬೇಕು,ಯಾವುದೇ ಜಾತಿ ಧರ್ಮ ನೋಡದೆ ಸರಿ ಸಮಾನವಾದ ಹಕ್ಕುಗಳನ್ನು ಸಂವಿಧಾನ ಬದ್ಧವಾಗಿ ಕಾಂಗ್ರೆಸ್ ಪಕ್ಷ ಕೊಟ್ಟಿದೆ.
ಹೊರದೇಶಗಳಲ್ಲಿ ಮಹಿಳೆಯರಿಗೆ ಮತದಾನದ ಹಕ್ಕು ಇರುವುದಿಲ್ಲ ಅಂತಹ ಸಂದರ್ಭದಲ್ಲಿ ಬಡವ, ಶ್ರೀಮಂತ, ಹೆಣ್ಣು ಗಂಡು ಎನ್ನದೆ ಸಮಾನ ಮತದಾನದ ಹಕ್ಕು ಕೊಟ್ಟವರು ಅಂಬೇಡ್ಕರ್ ರವರು. ಕಾಂಗ್ರೆಸ್ ಸರ್ಕಾರ ಪಂಚಾಯತ್ ರಾಜ್ ಜಾರಿಗೆ ತಂದು, ಮಹಿಳೆಯರು, ದಲಿತರು, ಹಿಂದುಳಿದ ಲಕ್ಷಾಂತರ ಮಂದಿ ರಾಜಕೀಯ ಅಧಿಕಾರ ಹಿಡಿಯುವಂತೆ ಮಾಡಿದೆ. ಜವಹರ್ ಲಾಲ್ ನೆಹರು ಕಾಂಗ್ರೆಸ್ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ದೇಶದ ಎಲ್ಲಾ ನದಿಗಳಿಗೂ ಅಣೆಕಟ್ಟು ನಿರ್ಮಿಸಿ ನೀರಾವರಿ ಯೋಜನೆಗಳನ್ನು ಅಭಿವೃದ್ಧಿಪಡಿಸಿ ರೈತರ ಲಕ್ಷಾಂತರ ಎಕರೆ ಜಮೀನುಗಳನ್ನು ಹಸಿರು ಗೊಳಿಸಿದೆ. ನರೇಗಾ ಯೋಜನೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದು ಲಕ್ಷಾಂತರ ಜನರಿಗೆ ಉದ್ಯೋಗ ಸೃಷ್ಟಿ ಮಾಡಿ ನಿರುದ್ಯೋಗ ಸಮಸ್ಯೆ ನಿವಾರಿಸಿದೆ. ಇಂದು ಹೊರದೇಶಗಳಲ್ಲಿ ಉದ್ಯೋಗ ಮಾಡುತ್ತಿರುವ ಡಾಕ್ಟರ್ಸ್, ಇಂಜಿನಿಯರ್ಸ್ ಅನ್ನು ಮಾಡಿದ್ದು ಕಾಂಗ್ರೆಸ್ ಸರ್ಕಾರ ಬಿಜೆಪಿಯವರು ಮಾಡಿದ್ದಾರೇನು? ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಬಿಜೆಪಿ ಸುಳ್ಳು ಸುಳ್ಳು ಹೇಳಿ ಜನರಿಗೆ ಮೋಸ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ 2,29,000 ಉದ್ಯೋಗ ಕಾಲಿ ಇದೆ ಏಕೆ ಭರ್ತಿ ಮಾಡಿಲ್ಲ? ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತರಿಗೆ ಮೀಸಲಾತಿಯಂತೆ ಉದ್ಯೋಗ ಕೊಡಬೇಕೆಂದು ನೇಮಕಾತಿ ಮಾಡಿಲ್ಲ ಎಂದು ಆರೋಪಿಸಿದರು. ವಾರಣಾಸಿಯಲ್ಲಿ ಸೃಷ್ಟಿಯಾದ ಇಂಜಿನ್ ಗಳು ಕೆಲಸ ಮಾಡುತ್ತಿಲ್ಲ, ಡಬಲ್ ಇಂಜಿನ್ ಓಡುತ್ತಿಲ್ಲ ಕೆಟ್ಟು ನಿಂತಿದೆ. ರಾಜ್ಯ ಶಿಕ್ಷಣ ನೀತಿ ಸರಿಯಾಗಿಲ್ಲ, ಬಡವರ ಮಕ್ಕಳು ಓದುವ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಇದರಿಂದ ಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇಂದು ಶಿಕ್ಷಕರು, ಡಾಕ್ಟರ್ಸ್, ಇಂಜಿನಿಯರ್ಸ್, ನೇಮಕಾತಿ ಮಾಡಿ ಅಭಿವೃದ್ಧಿ ಮಾಡಬೇಕಾಗಿದೆ, ಕಾಂಗ್ರೆಸ್ ಸರ್ಕಾರ ಉಚಿತ ವಿದ್ಯುತ್, ಮಹಿಳೆಯರಿಗೆ 2,000 ಸಹಾಯಧನ, ಪದವೀಧರರಿಗೆ ಮತ್ತು ಡಿಪ್ಲೋಮಾ ಇಂಜಿನಿಯರ್ಸ್ಗೆ ಮಾಸಿಕ 3000 ರೂ ನೀಡುವ ಗ್ಯಾರಂಟಿ ಕಾರ್ಡ್ ನೀಡುತ್ತಿದ್ದೇವೆ.

ದೇಶದ ಪ್ರಗತಿಗೆ ಸಂವಿಧಾನ ಉಳಿವಿ ಗೆ ಪ್ರಜಾಪ್ರಭುತ್ವದ ಉಳಿವಿಗೆ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಹೇಳಿದರು. ಕಾಂಗ್ರೆಸ್ ಮುಖಂಡರು ಮಾಜಿ ಸಭಾಪತಿ ಬಿ ಎಲ್ ಶಂಕರ್ ಮಾತನಾಡಿ ದೇಶದಲ್ಲಿ ಅಸ್ಪೃಶ್ಯತೆ ತೊಲಗಿಸಲು ಕ್ರಮ ತೆಗೆದುಕೊಂಡಿದ್ದು ಕಾಂಗ್ರೆಸ್ ಸರ್ಕಾರ, ಬ್ಯಾಂಕುಗಳನ್ನು ರಾಷ್ಟ್ರೀಕೃತಗೊಳಿಸಿದ್ದು ಕಾಂಗ್ರೆಸ್, ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದ ಯೋಜನೆಗಳು ಅಭಿವೃದ್ಧಿ ಕಾರ್ಯಕ್ರಮಗಳನ್ನು ನೆನಪಿಟ್ಟುಕೊಂಡು ಮತ ಚಲಾಯಿಸಿ ಸಾಮಾಜಿಕ ನ್ಯಾಯ ಉಳಿಸಿ. ಸತ್ಯ ಹೇಳುವುದನ್ನು ನಿಲ್ಲಿಸುವುದಿಲ್ಲ ಅಧಿಕಾರ ಮನೆ ಎಲ್ಲಾ ಹೋದರು ಪರವಾಗಿಲ್ಲ ಸತ್ಯವನ್ನೇ ಮಾತನಾಡುತ್ತೇನೆ ಎಂದು ಕಾಂಗ್ರೆಸ್ಸಿನ ರಾಹುಲ್ ಗಾಂಧಿ ಹೇಳಿದ್ದಾರೆ. ಆದರೆ ಬಿಜೆಪಿಯವರು ಕರ್ನಾಟಕ,ಗೋವಾ,ಮಹಾರಾಷ್ಟ್ರ ಮಣಿಪುರ,ನಾಗಾಲ್ಯಾಂಡ್,ಎಲ್ಲಾ ಕಡೆಯೂ ಆಪರೇಷನ್ ಕಮಲದ ಮೂಲಕ ಶಾಸಕರನ್ನು ಕಳ್ಳತನ ಮಾಡುತ್ತಿದ್ದಾರೆ ಎಂದು ದೂರಿದರು. ವೇದಿಕೆಯಲ್ಲಿ ಜಿಲ್ಲಾಧ್ಯಕ್ಷರಾದ ಡಾ. ಅಂಶುಮಂತ್, ತರೀಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಜಿಎಚ್ ಶ್ರೀನಿವಾಸ್, ಲೋಕೇಶ್ ತಾಳಿಕಟ್ಟೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಯು ಫಾರೂಕ್, ರವಿ ಶಾನಬೋಗ್, ಗೊಲ್ಲರಹಳ್ಳಿ ರಂಗಪ್ಪ, ಬಸವರಾಜ್, ಪುರಸಭಾ ಅಧ್ಯಕ್ಷರಾದ ಕಮಲಾ ರಾಜೇಂದ್ರ, ಎ ಆರ್ ರಾಜಶೇಖರ್, ಸಮಿವುಲ್ಲಾ, ಪ್ರಚಾರ ಸಮಿತಿ ಅಧ್ಯಕ್ಷರಾದ ಪರಶುರಾಮ್, ಎಸ್ ಸಿ ಎಸ್ ಟಿ ಘಟಕದ ಅಧ್ಯಕ್ಷರಾದ ಗೌರೀಶ್, ಮಾಜಿ ಪುರಸಭಾ ಸದಸ್ಯರಾದ ಧರ್ಮರಾಜ್, ಲಕ್ಕವಳ್ಳಿ ಹೋಬಳಿ ಅಧ್ಯಕ್ಷರಾದ ಎಚ್ಎನ್ ಮಂಜುನಾಥ್, ಕಸಬಾ ಹೋಬಳಿ ಅಧ್ಯಕ್ಷರಾದ ವೀರಮಣಿ, ರಾಮಚಂದ್ರಪ್ಪ, ಕೆಪಿಸಿಸಿ ಸದಸ್ಯರಾದ ಎಚ್ ವಿಶ್ವನಾಥ್, ಚಂದ್ರ ಮೌಳಿ, ಮಹಿಳಾ ಘಟಕದ ಅಧ್ಯಕ್ಷರಾದ ಭಾಗ್ಯಲಕ್ಷ್ಮಿ, ಪುರಸಭಾ ಮಾಜಿ ಅಧ್ಯಕ್ಷರಾದ ಪರ್ವೀನ್ ತಾಜ್, ಜಯ ಕರ್ನಾಟಕ ಸಂಘಟನೆಯ ಜಗದೀಶ್, ಇನ್ನು ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ