ಬೀದಿ ಬದಿಯ ವ್ಯಾಪಾರಿಗಳ ಕುಟುಂಬದ ಆರ್ಥಿಕ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ 8 ವಿವಿಧ ಸಾಲ ಸೌಲಭ್ಯಗಳ ಯೋಜನೆ – ಪಡೆದು ಕೊಳ್ಳಲು ಪುರಸಭೆ ಅಧ್ಯಕ್ಷರಿಂದ ಕರೆ.
ಹುನಗುಂದ ಫೆ.15

ಪಟ್ಟಣದ ಪುರಸಭೆ ಭವನದಲ್ಲಿ ಬುಧವಾರ ಹಮ್ಮಿಕೊಂಡ ಕಾರ್ಯಾಲಯ ಹಾಗೂ ಜಾಗೃತಿ ಗ್ರಾಮೀಣಾಭಿವೃಧ್ದಿ ಸಂಸ್ಥೆಯ ಆಶ್ರಯದಲ್ಲಿ ಆಶ್ರಯದಲ್ಲಿ ಪಿ.ಎಂ. ಸ್ವನಿಧಿ ಶಿಬಿರ ಹಾಗೂ 8 ಕಲ್ಯಾಣ ಯೋಜನೆಗಳ ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ ಉದ್ಘಾಟಿಸಿ ಮಾತನಾಡಿದರು. ಮುಖ್ಯಾಧಿಕಾರಿ ಗುರುರಾಜ ಚೌಕಿಮಠ, ಅಮರೇಶ ನಾಗೂರ ಇದ್ದರು.
ಬೀದಿ ಬದಿಯಲ್ಲಿ ವ್ಯಾಪಾರ ನಡೆಸುವ ಕುಟುಂಬಗಳ ಆರ್ಥಿಕ ಅಭಿವೃದ್ಧಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ 8 ವಿವಿಧ ಸಾಲ ಸೌಲಭ್ಯ ಯೋಜನೆಗಳನ್ನು ಸದುಪಯೋಗ ಪಡೆದು ಕೊಳ್ಳಬೇಕು ಎಂದು ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ ಹೇಳಿದರು. ಪಟ್ಟಣದ ಪುರಸಭೆ ಭವನದಲ್ಲಿ ಬುಧವಾರ ಹಮ್ಮಿಕೊಂಡ ಜಿಲ್ಲಾಡಳಿತ, ಕೌಶಲಾಭಿವೃದ್ಧಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ, ಪುರಸಭೆ ಕಾರ್ಯಾಲಯ ಹಾಗೂ ಜಾಗೃತಿ ಗ್ರಾಮೀಣಾಭಿವೃಧ್ದಿ ಸಂಸ್ಥೆಯ ಆಶ್ರಯದಲ್ಲಿ ಪಿ.ಎಂ. ಸ್ವನಿಧಿ ಶಿಬಿರ ಹಾಗೂ 8 ಕಲ್ಯಾಣ ಯೋಜನೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಪುರಸಭೆ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ ಮಾತನಾಡಿ, ಬೀದಿ ಬದಿಯಲ್ಲಿ ವ್ಯಾಪಾರವನ್ನು ನಂಬಿ ಜೀವನ ಸಾಗಿಸುತ್ತಿರುವ ಕುಟುಂಬಗಳ ಆರ್ಥಿಕ ನೆರವಿಗಾಗಿ ಸರ್ಕಾರ ಅನೇಕ ರೀತಿಯ ಸಾಲ ಸೌಲಭ್ಯದ ಯೋಜನೆಗಳನ್ನು ಜಾರಿಗೆ ತಂದಿದೆ. ಅದರ ಸದುಪಯೋಗ ಪಡಿಸಿ ಕೊಂಡು ನೆಮ್ಮದಿಯ ಬದುಕನ್ನು ರೂಪಿಸಿ ಕೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು. ಜಾಗೃತಿ ಗ್ರಾಮೀಣಾಭಿವೃದ್ಧಿಯ ಅಧ್ಯಕ್ಷ ಅಮರೇಶ ನಾಗೂರ ಮಾತನಾಡಿ, ಬೀದಿ ಬದಿ ವ್ಯಾಪಾರಿಗಳಿಗೆ ನೆರವು ನೀಡಲು ಪ್ರಧಾನ ಮಂತ್ರಿ ಜೀವನ್ ಜ್ಯೋತಿ, ಸುರಕ್ಷಾ ಭೀಮಾ, ಶ್ರಮಯೋಗಿ ಧನ ಯೋಜನೆ, ಒನ್ ನೇಷನ್ ಒನ್ ರೇಷನ್ ಕಾರ್ಡ, ಪ್ರಧಾನ ಮಂತ್ರಿ ಜನಧನ್ ಯೋಜನೆ, ಲೇಬರ್ ಕಾರ್ಡ, ಜನನಿ ಸುರಕ್ಷಾ ಯೋಜನೆ, ಪ್ರಧಾನ ಮಂತ್ರಿ ಮಾತೃ ವಂದಾನ ಯೋಜನೆ, ಪಿ.ಎಂ. ಸ್ವನಿಧಿ ಯೋಜನೆ ಸೇರಿದಂತೆ ಅನೇಕ ಸಾಲ ಸೌಲಭ್ಯ ಯೋಜನೆ ಜಾರಿಗೆ ತರಲಾಗಿದೆ. ಪಾರಂಪರಿಕವಾಗಿ ವ್ಯಾಪಾರವನ್ನೇ ನಂಬಿ ಜೀವನ ಸಾಗಿಸುತ್ತಿರುವ ಕುಟುಂಬಗಳ ಆರ್ಥಿಕ ಅಭಿವೃದ್ಧಿಗೆ ಇದು ಪೂರಕವಾಗಿದೆ ಎಂದರು. ಉಪನ್ಯಾಸಕ ಎಸ್.ವಿ ಬ್ಯಾಡನ್ ನವರ ಮಾತನಾಡಿ ಆತ್ಮನಿರ್ಭರ್ ಎಂದರೆ ಪ್ರತಿಯೋಬ್ಬ ಬೀದಿ ಬದಿ ವ್ಯಾಪಾರಸ್ತರು ಕೂಡಾ ಶೈಕ್ಷಣಿಕವಾಗಿ, ಆರ್ಥಿಕವಾಗಿ ಅಭಿವೃದ್ದಿ ಪಡಿಸುವ ಪ್ರಮುಖ ಉದ್ದೇಶವಾಗಿದೆ ಎಂದರು.ಮುಖಂಡರಾದ ಹರ್ಷದ್ ನಾಯಕ, ಮುತ್ತಣ್ಣ ಗಂಜೀಹಾಳ, ಪುರಸಭೆ ಅಧಿಕಾರಿಗಳಾದ ಎಂ.ಎಸ್ ಲಮಾಣಿ, ಶ್ಯಾಮಸುಂದರ, ಇಬಾಹಿಂ ಗುಡ್ಡದ, ಡಾ, ಬಾಷಾ ಹವಾಲ್ದಾರ, ಡಾ, ಜಗದೀಶ ಹಿರೇಮಠ, ಪ್ರವೀಣ ಚೂರಿ, ಮುಜೀಬ್ ಕಲಬುರ್ಗಿ, ಸೇರಿದಂತೆ ಇತರರು ಇದ್ದರು. ಇದೇ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಉಚಿತ ಆರೋಗ್ಯ ತಪಾಸಣೆ ನಡೆಯಿತು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮಲ್ಲಿಕಾರ್ಜುನ.ಬಿ.ಬಂಡರಗಲ್ಲ.ಹುನಗುಂದ