ಮತದಾನ ಬಹಿಷ್ಕಾರ ಕೈಗೊಂಡ ಮುಸ್ಲಿಂ ಸಮುದಾಯ.
ನಿಂಬಳಗೆರೆ ( ಏ.30 ) :

ಕೊಟ್ಟೂರು ತಾಲ್ಲೂಕಿನ ನಿಂಬಳಗೆರೆ ಗ್ರಾಮದಲ್ಲಿ ಮುಸ್ಲಿಂ ಸಮುದಾಯದವರಿಗೆ ಶಾದಿಮಹಲ್ ನಿರ್ಮಿಸಲು ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಕೆಲವು ವರ್ಷಗಳ ಹಿಂದೆ ಮಂಜೂರಾದ ನಿವೇಶನವನ್ನು ಈಚೆಗೆ ಬೇರೆಯವರು ಅಕ್ರಮವಾಗಿ ವಶಪಡಿಸಿಕೊಂಡಿರುತ್ತಾರೆ ಎಂದು ಸಮುದಾಯದ ಸುಭಾನ್ ಸಾಹೇಬ್ ಹಾಗೂ ಇತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿವೇಶನ ವಶಪಡಿಸಿಕೊಂಡಿರುವ ಬಗ್ಗೆ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗದ ಕಾರಣ ಮೇ 10 ರಂದು ನಡೆಯುವ ಚುನಾವಣೆಯಲ್ಲಿ ಸಾಮೂಹಿಕವಾಗಿ ಮತದಾನ ಬಹಿಷ್ಕಾರಕ್ಕೆ ಮುಂದಾಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ತಾಲೂಕ ವರದಿಗಾರರು : ಪ್ರದೀಪ್.ಕುಮಾರ್.ಕೊಟ್ಟೂರು