ಕೆ.ಆರ್.ಎಸ್ ಪಕ್ಷದ SC/ST ಘಟಕದ ರಾಜ್ಯ ಉಪಾಧ್ಯಕ್ಷರಾಗಿ – ಸಂತೋಷ್ ಕುಮಾರ್ ನೇಮಕ.
ಬಳ್ಳಾರಿ ಏ.04

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಎಸ್/ಸಿ ಎಸ್/ಟಿ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಬಳ್ಳಾರಿಯ ಸಂತೋಷ್ ಕುಮಾರ್ ಅವರನ್ನು ರಾಜ್ಯ ಸಮಿತಿಯು ನೇಮಕ ಮಾಡಿ ಆದೇಶ ಹೊರಡಿಸಿದೆ. ಆದೇಶ ಪತ್ರ ಸ್ವೀಕರಿಸಿ ಮಾತನಾಡಿದ ಸಂತೋಷ್ ಕುಮಾರ್ ಅವರು ಸ್ವಚ್ಛ, ಪ್ರಮಾಣಿಕ, ಪ್ರಾದೇಶಿಕ, ಜನಪರ ರಾಜಕಾರಣಕ್ಕಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವೂ ಹಲವು ವರ್ಷಗಳಿಂದ ನಿರಂತರವಾಗಿ ರೈತರ, ಮಹಿಳೆಯರ, ವಿದ್ಯಾರ್ಥಿಗಳ ಕೃಷಿ ಕಾರ್ಮಿಕರ ಪರವಾದ ಹೋರಾಟಗಳನ್ನು ಹಮ್ಮಿಕೊಂಡು ಲಂಚ ಮುಕ್ತ ಕರ್ನಾಟಕ, ಭ್ರಷ್ಟಾಚಾರ ಮುಕ್ತ ಕರ್ನಾಟಕ ನಿರ್ಮಿಸುವಲ್ಲಿ ಶ್ರಮಿಸುತ್ತಿದೆ. ಜೆಡಿಎಸ್ ಕಾಂಗ್ರೆಸ್ ಬಿಜೆಪಿ ಪಕ್ಷಗಳು ರಾಜ್ಯ ಮತ್ತು ದೇಶದಲ್ಲಿ ಹಿಂದುಳಿದ ತಳ ಸಮುದಾಯಗಳನ್ನ ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಬಳಸಿಕೊಂಡು ರಾಜಕೀಯವಾಗಿ, ಆರ್ಥಿಕವಾಗಿ,ಸಮಾಜಿಕವಾಗಿ ಮೂಲೆಗುಂಪು ಮಾಡುತ್ತಿದ್ದಾರೆ. ಹಾಗಾಗಿ ಕೆ.ಆರ್.ಎಸ್ ಪಕ್ಷವು ರಾಜ್ಯಾದ್ಯಂತ ಹಿಂದುಳಿ ದವರನ್ನು ತಳ ಸಮುದಾಯದವರು ಗುರುತಿಸಿ ಅವರಿಗೆ ವಿಶೇಷವಾಗಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಬೆಂಬಲಿಸಿ ಅವರ ಕುಂದು ಕೊರತೆಗಳಿಗೆ ರಾಜ್ಯಾದ್ಯಂತ ಧ್ವನಿ ಆಗಲೂ ನನ್ನಂತ ನಿಷ್ಠಾವಂತ ಕಾರ್ಯಕರ್ತನನ್ನ ಗುರುತಿಸಿ ದೊಡ್ಡ ಜವಾಬ್ದಾರಿ ನೀಡಿದ್ದಕ್ಕಾಗಿ ಕೆ.ಆರ್.ಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರಿಗೆ ರಾಜ್ಯ ಸಮಿತಿಯ ಎಲ್ಲಾ ಪದಾಧಿಕಾರಿಗಳಿಗೆ ನಾನು ಧನ್ಯವಾದ ತಿಳಿಸಿ ನನಗೆ ನೀಡಿದ ಜವಾಬ್ದಾರಿಯನ್ನ ಡಾಕ್ಟರ್, ಬಾಬಾ ಸಾಹೇಬ ಅಂಬೇಡ್ಕರ್ ರವರ ತತ್ವ-ಆದರ್ಶಗಳ ಅಡಿಯಲ್ಲಿ ಪಕ್ಷದ ತತ್ವ-ಸಿದ್ಧಾಂತಗಳ ಅಡಿಯಲ್ಲಿ ನಿರ್ವಹಿಸಿ ಕೊಂಡು ಹೋಗುತ್ತೇನೆ ಎಂದು ತಿಳಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರತಾಪ್.ವಾಯ್.ಕಿಳ್ಳಿ.ಇಲಕಲ್ಲ

