ನಿಂಬಳಗೇರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ.
ಕೊಟ್ಟೂರು ಆ.30

ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಮಕ್ಕಳು ಕೂಡ ಉತ್ಸಾಹ ದಿಂದ ಪಾಲ್ಗೊಳ್ಳಬೇಕು ಎಂದು ಉಜ್ಜಿನಿ ಕ್ಲಾಸ್ಟರ್ ಸಿ.ಆರ್.ಪಿ ಗಿರಿಜಾ ಬಣಕಾರ್ ಹೆಳಿದರು. ನಿಂಬಳಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಹಮ್ಮಿಕೊಂಡಿದ್ದ ಉಜ್ಜಯಿನಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಭಾ ಕಾರಂಜಿ, ಮಕ್ಕಳ ಮೇಳ, ಕ್ರಿಡಾ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ.

ಇಲ್ಲಿ ಮಕ್ಕಳು ತಮ್ಮಲ್ಲಿರುವ ಕಲೆ, ಸಾಹಿತ್ಯ, ಜಾನಪದ ಪ್ರಾಕಾರದ ಪ್ರತಿಭೆಯನ್ನು ತೋರಿ ಸಾಂಸ್ಕೃತಿಕವಾಗಿ ಮುಂದೆ ಬರಬೇಕು ಎಂದರು.ಕಾರ್ಯಕ್ರಮ ಉದ್ಘಾಟಿಸಿದ ಗ್ರಾಪಂ ಅಧ್ಯಕ್ಷ ಎಂ. ಮಹಾಂತೇಶ್ ಮಾತನಾಡಿ, ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಅನಾವರಣ ಮಾಡುವ ಮೂಲಕ ಮಕ್ಕಳು ಸರ್ವಾಂಗೀಣ ಬೆಳವಣಿಗೆ ಸಾಧಿಸಲು ಅವಕಾಶ ಕಲ್ಪಿಸಬೇಕು. ಸೋಲು, ಗೆಲುವಿನ ಬಗ್ಗೆ ಯೋಚಿಸದೆ ಸ್ಪರ್ಧೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದರು.

ಪಿಡಿಒ ಪ್ರಶಾಂತ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕರಾದ ರಾಜಣ್ಣ ನಿಂಬಳಗೇರೆಯ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಮಹಾಂತೇಶ್ ಹಾಗೂ ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು, ಶಿಕ್ಷಣ ಪ್ರೇಮಿಗಳು, ಹಳೆ ವಿದ್ಯಾರ್ಥಿಗಳು, ಬಿ.ಆರ್.ಪಿ ಎನ್.ಎಂ. ಬಸವರಾಜಯ್ಯ, ಎ.ಜಿ.ಒ ಕಾರ್ಯದರ್ಶಿ ಸಿದ್ದಪ್ಪ, ಸಿಆರ್‍ಪಿಗಳಾದ ಅಣಜಿ ಸಿದ್ದಲಿಂಗಪ್ಪ, ನಾಗರತ್ನಮ್ಮ, ಶಿಕ್ಷಕರಾ ಕೊಟ್ರೇಶ ,ಸಿದ್ದಪ್ಪ, ಶಶಿಕಲಾ ರೇಣುಕಮ್ಮ, ಅಶ್ವಿನಿ , ಉಜ್ಜಯಿನಿ ಕ್ಲಸ್ಟರ್ ವಿಭಾಗದ ಎಲ್ಲಾ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್.ಕುಮಾರ್.ಸಿ.ಕೊಟ್ಟೂರು.