ಶ್ರೀ ಕನಕ ವಿದ್ಯಾ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ.
ತಾಯಕನಹಳ್ಳಿ ಜೂನ್.05

ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿ ಶ್ರೀ ಗುರು ಕನಕ ವಿದ್ಯಾ ಕೇಂದ್ರ ಶಾಲಾ ಆವರಣದಲ್ಲಿ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿ ಸಸಿಗಳನ್ನು ನಡಲಾಯಿತು. ಈ ವೇಳೆ ಮುಖ್ಯ ಶಿಕ್ಷಕಿ ಸುನೀತಾ ಗುರುರಾಜ್ ಮಕ್ಕಳಿಗೆ ಪರಿಸರ ದಿನಾಚರಣೆಯ ಮಾಹಿತಿಯನ್ನು ನೀಡುವ ಮೂಲಕ ಹಸಿರೇ ಉಸಿರು, ಕಾಡನ್ನು ಬೆಳೆಸಿ ನಾಡನ್ನು ಉಳಿಸಿ, ಮನೆಗೊಂದು ಮರ ಊರಿಗೊಂದು ವನ, ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಘೋಷಣೆಗಳ ಮೂಲಕ ಮಕ್ಕಳಿಗೆ ಪ್ರತಿಯೊಬ್ಬರು ತಮ್ಮ ತಮ್ಮ ಹುಟ್ಟು ಹಬ್ಬದ ದಿನದಂದು ಒಂದೊಂದು ಗಿಡಗಳನ್ನು ಬೆಳೆಸುವ ಒಂದು ಹವ್ಯಾಸವನ್ನು ಬೆಳೆಸಿಕೊಳ್ಳಲು ತಿಳಿಸಿದರು. ಇದರಿಂದ ಮಳೆ ಬೆಳೆ ಚೆನ್ನಾಗಿದ್ದು ಪರಿಸರದಲ್ಲಿ ಪ್ರಾಣಿ ಪಕ್ಷಿ ನಾವು ನೀವೆಲ್ಲರೂ ಸಂತಸದಿಂದ ಇರಬಹುದೆಂದು ತಿಳಿಸಿದರು. ಈ ವೇಳೆ ಕಾರ್ಯದರ್ಶಿ ಬಿ ಟಿ ಮಂಜಣ್ಣ, ಸಹ ಶಿಕ್ಷಕರಾದ ಹಂಪಮ್ಮ ಪೂಜಾರ್, ಮಂಜುಳ ಎಂ, ಸಿ ಆರ್ ಸುಮಿತ್ರ, ಪ್ರಭಾಕರ್ ಎಂ, ರುದ್ರಮ್ಮ ಸಿ, ಬಸವರಾಜ್ ಜಿ. ಪಿ, ಕುಬೇರ ಎಂ ಜೆ , ಸರೋಜಾ ಆರ್ ಸೇರಿದಂತೆ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.
ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್. ಕಾನಾ ಹೊಸಹಳ್ಳಿ.