ವಿಶ್ವ ಡೆಂಗ್ಯೂ ದಿನ ….
ಅಂಜುಟಗಿ (ಮೇ.18) :
ವಿಜಯಪೂರ ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ಅಂಭಾಭವಾನಿ ದೇವಸ್ಥಾನದಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಶಿಕ್ಷಣಾದಿಕಾರಿ ಸುನಂದಾ ಅಂಬಲಗಿ ಅವರು ಡೆಂಗ್ಯೂ ಜ್ವರವು ವೈರಸನಿಂದ ಉಂಟಾಗುತ್ತದೆ. ಹಗಲು ಹೊತ್ತಿನಲ್ಲಿ ಈಡೀಸ್ ಸೊಳ್ಳೆಯಿಂದ ಡೆಂಗ್ಯೂ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈಡೀಸ್ ಸೊಳ್ಳೆಗಳು ಮನೆಯಲ್ಲಿನ ಕಲುಷಿತ ನೀರಿನ ಸಂಗ್ರಹಗಳಲ್ಲಿ ಉತ್ಪತ್ತಿಯಾಗುತ್ತದೆ ಎಂದು ಹೇಳಿದರು.

ಮನೆಯಲ್ಲಿನ ತೊಟ್ಟಿ, ಬ್ಯಾರಲದ ಡ್ರಮ್‌ಗಳಲ್ಲಿನ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಚಗೊಳಿಸಬೇಕು. ನಂತರ ನೀರು ತುಂಬಬೇಕು. ನೀರಿನ ಶೇಖರಣೆಗಳನ್ನು ಮುಚ್ಚಿ ಇಡಬೇಕು, ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಿಬೇಕು, ಘನ ತ್ಯಾಜ್ಯ ವಸ್ತುಗಳನ್ನು ವಿಲೇವಾರಿ ಮಾಡಿ ಪರಿಸರವನ್ನು ಸ್ವಚ್ಚವಾಗಿಡಬೇಕು, ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆಯುವವರು ವಿಶೇಷವಾಗಿ ವೃದ್ದರು, ಗರ್ಭಿಣಿಯರು, ಮಕ್ಕಳು ಸೊಳ್ಳೆಗಳು ಕಚ್ಚದಂತೆ ಮೈ ತುಂಬಾ ಬಟ್ಟೆ ಧರಿಸಬೇಕು ಸೊಳ್ಳೆ ಪರದೆ ಅಥವಾ ಸೊಳ್ಳೆ ಬತ್ತಿ ಮಲಾಮು ದ್ರಾವಣ ಇವುಗಳನ್ನು ಉಪಯೋಗಿಸಬೇಕು ಎಂದ ಅವರು, ಈಡೀಸ್ ಲಾರ್ವಾ ಸಮೀಕ್ಷೇಗಾಗಿ ನಿಮ್ಮ ಮನೆಗೆ ಭೇಟಿ ನೀಡುವ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರಿಗೆ ಸಹಕಾರ ನೀಡಿ ಸಲಹೆಗಳನ್ನು ಪಾಲಿಸಿ ಎಂದರು.
ಡೆಂಗಿ ಜ್ವರದ ಲಕ್ಷಣಗಳು:-
ಮನುಷ್ಯನಿಗೆ ತೀವ್ರ ಜ್ವರ, ವೀಪರೀತ ತಲೆನೋವು ಕಣ್ಣಿನ ಹಿಂಬಾಗದಲ್ಲಿ ನೋವು ಮೌಂಸಖಂಡಗಳ ಮತ್ತು ಕೀಲುಗಳ ವೀಪರೀತ ನೋವು, ವಾಕರಿಕೆ, ವಾಂತಿ ಈ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ. ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ತಪಾಸಣೆ ಮಾಡಿಕೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಎಸ್.ಎಲ್ ಬಂಡೆನವರ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಎ.ಕೆ. ರೆಡ್ಡಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಇದ್ದರು.
ಜಿಲ್ಲಾ ವರದಿಗಾರರು:ಬೀ.ಎಸ್.ಹೊಸೂರ್. ವಿಜಯಪುರ