ಹೂಡೇಂ ಕಂಪಳ ರಂಗ ಸ್ವಾಮಿ ಪ್ರೌಢ ಶಾಲೆಯಲ್ಲಿ ಕಲಿಕಾಸರೆ ಪುಸ್ತಕ ವಿತರಣೆ.
ಹೂಡೇಂ ಮೇ.25

ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮದ ಶ್ರೀ ಕಂಪಳ ರಂಗ ಸ್ವಾಮಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರತಿಭಾ ಅಂಕಗಳು ಗಳಿಸಲು ಕಲಿಕಾಸರೆ ಪುಸ್ತಕ ವಿತರಣಾ ಸಮಾರಂಭ ನಡೆಯಿತು. ಇಲ್ಲಿನ ಅರಿವು ಕೇಂದ್ರ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಹೂಡೇಂ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಲಬುರ್ಗಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತರ ಕಾರ್ಯಾಲಯ ಇವರಿಂದ ಸರಬರಾಜು ಅಕ್ಷರ ಆವಿಷ್ಕಾರ ಕಲಿಕಾಸರೆ ಪುಸ್ತಕಗಳನ್ನು ವಿದ್ಯಾರ್ಥಿಗಳು ಸದ್ಬಳಕೆಗೆ ಮಾಡಿಕೊಂಡು ಹಾಗೂ ಶಾಲೆಯ ಮುಖ್ಯ ಗುರುಗಳು, ಶಿಕ್ಷಕ ವೃಂದದವರು ಮಕ್ಕಳಿಗೆ ಪಠ್ಯ ಪುಸ್ತಕದ ಬೋಧನೆ ಮಾಡಿ ಅವರ ಪರಿಶ್ರಮ ದಿಂದ ಈ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಕೆ ಟಿ ಸಿಂಚನ ಪ್ರೌಢಶಾಲೆಗೆ 518 ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಹಾಗೂ ವಿದ್ಯಾರ್ಥಿನಿ ನಂದಿನಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕಗಳನ್ನು ಪಡೆದಿದ್ದಾಳೆ 507 ಅಂಕಗಳನ್ನು ಪಡೆದು ಶಾಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಮತ್ತು ವಿದ್ಯಾರ್ಥಿ ಎಂ ಎಂ ಸುದೀಪ 501 ಅಂಕಗಳನ್ನು ಪಡೆದು ಶಾಲೆಗೆ ಮೂರನೇ ಸ್ಥಾನ ಪಡೆದಿರುತ್ತಾನೆ. ಇವರಿಗೆ ಶಾಲಾ ಆಡಳಿತ ಮಂಡಳಿಯವರು ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಅವರಿಂದ ಹಾಗೂ ಅರಿವು ಕೇಂದ್ರ ಗ್ರಂಥಾಲಯ ಸದ್ಭಳಕೆ ಮಾಡಿ ಕೊಂಡಿದ್ದ ಮಕ್ಕಳಿಗೆ ಗ್ರಂಥಾಲಯ ಮೇಲ್ವಿಚಾರಕರು ಟಿ ಗುರುರಾಜ್ ಇವರಿಂದ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸರ್ವ ಸದಸ್ಯರು ಆಡಳಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಂದ ಹಾಗೂ ಊರಿನ ಗ್ರಾಮಸ್ಥರಿಂದ ಈ ಮಕ್ಕಳಿಗೆ ತುಂಬು ಹೃದಯದ ಧನ್ಯವಾದಗಳು ತಿಳಿಸಿದ್ದಾರೆ.
ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್. ಕಾನಾ ಹೊಸಹಳ್ಳಿ.