ಜಿ. ಎಚ್.ಶ್ರೀನಿವಾಸ್ ರವರನ್ನು ಗೆಲ್ಲಿಸಿದ ಮತದಾರರಿಗೆ ಅಭಿನಂದನಾ ಸಮಾರಂಭ – ಎಚ್.ಯು.ಫಾರೂಕ್.

ತರೀಕೆರೆ ಜೂನ್ 1

ಅತ್ಯಧಿಕ ಮತಗಳಿಂದ ಕಾಂಗ್ರೆಸ್ ಪಕ್ಷದ ಜಿಎಚ್ ಶ್ರೀನಿವಾಸ್ ರವರನ್ನು ಗೆಲ್ಲಿಸಿದ ಕ್ಷೇತ್ರದ ಎಲ್ಲಾ ಜಾತಿ, ಸಮಾಜ,ಧರ್ಮದ ಮತದಾರರಿಗೆ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ದಿನಾಂಕ- 2-6- 2023 ರಂದು ಶುಕ್ರವಾರದಂದು ಅಭಿನಂದನೆ ಸಲ್ಲಿಸುವ ಸಮಾರಂಭ ಏರ್ಪಡಿಸಲಾಗಿದೆ ಎಂದು ತರಿಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಯು ಫಾರೂಕ್ ರವರು ಪಕ್ಷದ ಕಾರ್ಯಾಲಯದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಈ ಕಾರ್ಯಕ್ರಮವನ್ನು ಪಟ್ಟಣದ ಹೋಟೆಲ್ ಅರಮನೆ ಆವರಣದಲ್ಲಿ ಸಂಜೆ 4:00ಗೆ ಏರ್ಪಡಿಸಲಾಗಿದೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕೆಂದು ಪತ್ರಿಕಾಗೋಷ್ಠಿಯಲ್ಲಿ ಕರೆ ನೀಡಿದರು. ಈ ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಪಕ್ಷದ ಮುಖಂಡರು ಅಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಕೆಪಿಸಿಸಿ ಸದಸ್ಯರಾದ ಎಚ್ ವಿಶ್ವನಾಥ್ ರವರು ಮಾತನಾಡಿ ಮತದಾರರು ರಾಜ್ಯದಲ್ಲಿ ಸ್ಥಿರವಾದ ಸರ್ಕಾರ ರಚನೆಗೆ ಸಹಕರಿಸಿದ್ದಾರೆ. ಇದಕ್ಕೆ ಬಿಜೆಪಿ ಯ ಭ್ರಷ್ಟಾಚಾರವು ಕಾರಣವಾಗಿದೆ. ಸರ್ಕಾರವು ಹಣಕಾಸಿನ ತೊಂದರೆಯಾಗಲಾರದ ರೀತಿಯಲ್ಲಿ ಐದು ಗ್ಯಾರಂಟಿಗಳನ್ನು ಜಾರಿ ಮಾಡಲಿದೆ ಎಂದು ಹೇಳಿದರು. ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಆನಂದಕುಮಾರ್ ಮಾತನಾಡಿ ರಾಜ್ಯದಲ್ಲಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪಕ್ಷವು 136 ಸ್ಥಾನಗಳನ್ನು ಪಡೆದು ಇಂದು ಐದು ಅಂಶಗಳ ಕಾರ್ಯಕ್ರಮ ಜಾರಿ ಮಾಡುತ್ತಿದೆ ಎಂದು ಹೇಳಿದರು. ಲಕ್ಕವಳ್ಳಿ ಹೋಬಳಿ ಅಧ್ಯಕ್ಷರಾದ ಮಂಜುನಾಥ್ ಲಾಡ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿದಿದೆ ಮುಂದೆ ತಾಲೂಕು ಪಂಚಾಯಿತಿ,ಜಿಲ್ಲಾ ಪಂಚಾಯಿತಿ, ಚುನಾವಣೆಗಳಲ್ಲಿ ಗೆಲುವು ಸಾಧಿಸಬೇಕಾಗಿದೆ ಆದ್ದರಿಂದ ಶಾಸಕರು ಕ್ಷೇತ್ರದ ಮೂಲ ಸಮಸ್ಯೆಗಳ ಬಗ್ಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ಪ್ರಚಾರ ಸಮಿತಿ ಅಧ್ಯಕ್ಷರಾದ ಪರಶುರಾಮ್ ಮಾತನಾಡಿ ಕೇಂದ್ರದ ಬಿಜೆಪಿ ಸರ್ಕಾರ ಸಂಸತ್ ಭವನ ಉದ್ಘಾಟನಾ ಸಮಾರಂಭದಲ್ಲಿ ಗೌರವಾನ್ವಿತ ರಾಷ್ಟ್ರಪತಿ ಅವರನ್ನು ಆಹ್ವಾನಿಸದೆ ಅಪಮಾನ ಮಾಡಿದ್ದಾರೆ ಎಂದು ಹೇಳಿದರು. ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button