ನಿವೃತ್ತ ಶಿಕ್ಷಕರಿಗೆ ಸನ್ಮಾನ ಶಿಕ್ಷಕ ವೃತ್ತಿ ಪವಿತ್ರವಾದುದು – ಸಂತೋಷ ಬಂಡೆ.
ಇಂಡಿ ಜೂನ್.3

ಮೌಲ್ಯಯುತ ಶಿಕ್ಷಣ ನೀಡುತ್ತಾ ಶಿಕ್ಷಣ ರಂಗದಲ್ಲಿ ಹಲವಾರು ಚೇತನಗಳಿಗೆ ಸ್ಫೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗುವ ಶಿಕ್ಷಕರು ತಮ್ಮ ನಿವೃತ್ತಿ ಜೀವನವನ್ನು ಸಮಾಜಮುಖಿ ಚಿಂತನೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಬದುಕು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಶಿಕ್ಷಕ ಸಂತೋಷ. ಬಂಡೆ. ಹೇಳಿದರು. ಅವರು ತಾಲೂಕಿನ ಹಿರೇರೂಗಿ ಮಿರಗಿ ವಸ್ತಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಬೋಧನಾ ಕೌಶಲ್ಯದಿಂದ ಶಿಕ್ಷಣ ರಂಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಸರ್ವರೊಂದಿಗೆ ಉತ್ತಮ ಬಾಂಧವ್ಯದೊಂದಿಗೆ ಸಾರ್ಥಕ ಸೇವೆ ಸಲ್ಲಿಸಿ,ನಿವೃತ್ತರಾದ ಶಿಕ್ಷಕರ ಮಾರ್ಗದರ್ಶನ ಅವಶ್ಯವಾಗಿದೆ ಎಂದರು. ನಿವೃತ್ತರಾದ ಬಸವರಾಜ. ಹರಿಜನ ಆರ್. ಎ. ಕತಾಳೆ ಬಿ. ಎಸ್. ತಳವಾರ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಬಿ. ಎಸ್. ತಳವಾರ,ಮಕ್ಕಳೊಂದಿಗೆ ಕಳೆದ ದಿನಗಳು, ಅವರನ್ನು ಶೈಕ್ಷಣಿಕವಾಗಿ ಸಾಮಾಜಿಕವಾಗಿ ತಿದ್ದಿ ಬೆಳೆಸಿದ ಸಾರ್ಥಕ ಸೇವೆ ಸಲ್ಲಿಸಿದ ತೃಪ್ತಿ ನನಗಿದೆ ಎಂದು ತಮ್ಮ ಸೇವೆಯ ದಿನಗಳನ್ನು ಸ್ಮರಿಸಿಕೊಂಡರು. ಶಾಲಾ ಮುಖ್ಯ ಶಿಕ್ಷಕ ಪಿ. ಕೆ. ಗುರವ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಕ ಸ್ಥಾನ ಪವಿತ್ರವಾದುದು,ನಿವೃತ್ತ ಶಿಕ್ಷಕರ ಶೈಕ್ಷಣಿಕ ಅನುಭವ ಹಾಗೂ ಮಾರ್ಗದರ್ಶನ ನಮಗೆಲ್ಲ ಸ್ಪೂರ್ತಿದಾಯಕವಾದುದು ಎಂದು ಹೇಳಿದರು. ಎಸ್ ಡಿ ಎಂ ಸಿ ಅಧ್ಯಕ್ಷ ಚನಬಸಪ್ಪ. ಗಿಣ್ಣಿ. ಅಧ್ಯಕ್ಷತೆ ವಹಿಸಿದ್ದರು.ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಶೇಖರ. ಡಂಗಿ ಸದಸ್ಯ ಇಮ್ರಾನ್. ಬುಡಕಿ, ಗ್ರಾಮದ ಹಿರಿಯರಾದ ಗಜಾನಂದ. ಗಿಣ್ಣಿ, ನರಸಪ್ಪ. ಜಂಬಗಿ, ಸಿದ್ರಾಮ. ಜಂಬಗಿ,ಮಹಾದೇವ. ಗುಡಿ, ಸುನೀಲ. ಜಂಬಗಿ ಉಪಸ್ಥಿತರಿದ್ದರು. ಶಿಕ್ಷಕ ಎಸ್. ಎಂ. ಲೋಣಿ ಸ್ವಾಗತಿಸಿದರು. ಶಿಕ್ಷಕಿ ಆರ್. ಆರ್. ಬೇನೂರ ನಿರೂಪಿಸಿ, ವಂದಿಸಿದರು.