ಮೆಟ್ರಿಕ್ ಪೂರ್ವ ಬಾಲಕರ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ.
ಕೂಡ್ಲಿಗಿ ಜೂನ್.4

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹಾಗೂ ಕೊಟ್ಟರು ತಾಲೂಕಿನಲ್ಲಿ, ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ, ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ. ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ,ಪ್ರವರ್ಗ-1,2ಎ,2ಬಿ,3ಎ,3ಬಿ. ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳಿಗೆ ಸೇರಿದ, 5ರಿಂದ10ನೇ ತರಗತಿಯ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೂಡ್ಲಿಗಿ ತಾಲೂಕು ಇಲಾಖಾಧಿಕಾರಿ ಕೆ.ಪಂಪಾಪತಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಜೂನ್ 15 ಆಗಿರುತ್ತದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್ ಸಿ ಮತ್ತು ಎಸ್ಟಿ ಯವರಿಗೆ 1ಲಕ್ಷ ₹. ಪ್ರವರ್ಗ-2ಎ,2ಬಿ. 3ಎ,3ಬಿ, ಹಾಗೂ ಹಿಂದುಳಿದ ವರ್ಗ ಮತ್ತು ಇತರೆ ಜಾತಿ ಯವರು. 44.500₹ ವಾರ್ಷಿಕ ಆದಾಯ ಮಿತಿ ನಿಗದಿ ಗೊಳಿಸಲಾಗಿದೆ. ಆನ್ ಲೇನ್ ನಲ್ಲಿ https://shp.karnataka.gov.in/ನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೂಡ್ಲಿಗಿ ತಾಲೂಕು ಕೇಂದ್ರದಲ್ಲಿರುವ ಹಿಂದುಳಿದ ವರ್ಗಗಳ, ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ಸಂಪರ್ಕಿಸಬಹುದು. ಕಚೇರಿಯ ಸ್ಥಿರ ದೂರವಾಣಿ ಸಂಖ್ಯೆ:08391 220583 ಮೂಲಕ ಸಂಪರ್ಕಿಸಬಹುದಾಗಿದೆ, ಎಂದು ಜಿಸಿಎಮ್. ಇಲಾಖೆಯ ತಾಲೂಕು ಅಧಿಕಾರಿ ಕೆ.ಪಂಪಾಪತಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ವರದಿಗಾರರು:ರಾಘವೇಂದ್ರ.ಸಾಲುಮನಿ. ಕೂಡ್ಲಿಗಿ