ರಕ್ತದಾನ ಜೀವದಾನ — ಕಾಸುಗೌಡ ಬಿರಾದಾರ.
ಇಂಡಿ ಜೂನ್.18

ಚಡಚಣ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂ 2 ಮರಡಿ ಶಾಲೆಯಲ್ಲಿ 2023-24 ನೇ ಸಾಲಿನ ವಿಶೇಷ ದಾಖಲಾತಿ ಹಾಗೂ ಹಾಜರಾತಿ ಆಂದೋಲನದ ಪ್ರಯುಕ್ತ ಪಟ್ಟಣದ ಪ್ರಮುಖ ಬೀದಿ ಬೀದಿಗಳಲ್ಲಿ ಘೋಷಣೆಯೊಂದಿಗೆ ಪ್ರಭಾತ್ ಪೇರಿ ಮಾಡಲಾಯಿತು. ಪ್ರಭಾತ್ ಪೇರಿಗೆ ಚಾಲನೆ ನೀಡಿ ಮಾತನಾಡಿದ ಮುಖ್ಯ ಶಿಕ್ಷಕ ಮಹಾಂತೇಶ ಉಮರಾಣಿ,ಸರ್ಕಾರಿ ಶಾಲೆಗೆ ಮಕ್ಕಳ ದಾಖಲಾತಿ ಹೆಚ್ಚಿಸಲು ಪ್ರತಿಯೊಬ್ಬರೂ ಮುಂದಾಗಬೇಕು. ಆರು ವರ್ಷದ ಮೇಲ್ಪಟ್ಟ ಹೆಣ್ಣಿರಲಿ, ಗಂಡಿರಲಿ ತಪ್ಪದೇ ಸರ್ಕಾರಿ ಶಾಲೆಯಲ್ಲಿ ಮಕ್ಕಳನ್ನು ನೋಂದಾಯಿಸಿ ಮಕ್ಕಳ ಶಿಕ್ಷಣ ಕಲಿಕೆಗೆ ತಂದೆ ತಾಯಂದಿರು ಸಹಕರಿಸಬೇಕು.ಶಾಲಾ ಮಕ್ಕಳಿಗಾಗಿ ಉಚಿತ ಸಮವಸ್ತ್ರ, ಹಾಲು, ಪುಸ್ತಕ, ಬಿಸಿಯೂಟ, ಶೂಭಾಗ್ಯ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು’ ಎಂದು ಹೇಳಿದರು. ಸಹಶಿಕ್ಷಕ ಬಸವರಾಜ ಕರಜಗಿ ಮಾತನಾಡಿ,ಗ್ರಾಮೀಣ ಭಾಗದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಿ ಎಲ್ಲರಿಗೂ ಗುಣಮಟ್ಟದ ಶಿಕ್ಷಣ ನೀಡುವುದೇ ನಮ್ಮ ಇಲಾಖೆಯ ಗುರಿಯಾಗಿದ್ದು,ಈ ನಿಟ್ಟಿನಲ್ಲಿ ಸರಕಾರ ಹತ್ತು ಹಲವು ಯೋಜನೆಗಳನ್ನು ಜಾರಿ ಮಾಡಿ, ಉಚಿತವಾಗಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಮಕ್ಕಳು ಸರಕಾರಿ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಶಿಕ್ಷ ಣ ಪಡೆಯಬೇಕು ಎಂದರು. ಇದೇ ಸಂದರ್ಭದಲ್ಲಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ಬಾಲಾಜಿ ಗಾಡಿವಡ್ಡರ, ಉಪಾಧ್ಯಕ್ಷರಾದ ಮಹಾದೇವಿ ಕೇಶೆಟ್ಟಿ, ಶಾಲೆಯ ಶಿಕ್ಷಕರಾದ ಜಗದೀಶ ಚಲವಾದಿ, ಮಾದೇವ ಆದಿಗೊಂಡೆ, ಡಿ.ಎಸ್ ಬಗಲಿ, ಎಸ್. ಜೆ ಲೋಣಿ, ಎಂ ಎಸ್ ನಿಂಬಾಳ್ಕರ್, ಆರ್ ವಾಯ್ ಗೌರ, ಜಯಶ್ರೀ ಗೊಟ್ಯಾಳ, ವಿ ಎಸ್ ಪತ್ತಾರ, ಸುರೇಖಾ ಝುಲ್ಪಿ ಹಾಗೂ ಎಸ್ ಡಿ ಎಂ ಸಿ ಸರ್ವ ಸದಸ್ಯರು ಹಾಜರಿದ್ದರು.