ಡಿ. 10.ರಂದು ಎಲ್ಲಾ ಇಲಾಖೆಗಳಲ್ಲಿ ಮಾನವ ಹಕ್ಕುಗಳ ದಿನಾಚರಣೆ ಆಚರಿಸಿ.
ಹೊಸಪೇಟೆ ಡಿಸೆಂಬರ್.8

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ನಿರ್ದೇಶನದಂತೆ, ಡಿ.10ರಂದು ಎಲ್ಲಾ ಇಲಾಖೆಗಳ ಕಚೇರಿಗಳಲ್ಲಿ ಮಾನವ ಹಕ್ಕುಗಳ ದಿನಾಚರಣೆಯನ್ನು ಆಚರಿಸುವಂತೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ತಿಳಿಸಿದ್ದಾರೆ.ಪ್ರತಿ ಜಿಲ್ಲೆಯಲ್ಲಿ ಮತ್ತು ಜಿಲ್ಲೆಯ ತಾಲೂಕಾ ಕೇಂದ್ರಗಳಲ್ಲಿ ಮಾನವ ಹಕ್ಕುಗಳ ದಿನಾಚರಣೆಯನ್ನು ಪ್ರತೀ ವರ್ಷದಂತೆ ಈ ವರ್ಷವೂ ಸಹ ವಿಶೇಷವಾಗಿ ಮಾನವ ಹಕ್ಕುಗಳ ದಿನಾಚರಣೆಯನ್ನು ಆಚರಿಸಲು ರಾಜ್ಯ ಮಾನವ ಹಕ್ಕುಗಳ ಆಯೋಗವು ನಿರ್ಧಾರವನ್ನು ಕೈಗೊಂಡಿದ್ದು,ಡಿ.10ಕ್ಕೆ ಎಲ್ಲಾ ಇಲಾಖೆಗಳ ಕಚೇರಿಗಳಲ್ಲಿ ಮಾನವ ಹಕ್ಕುಗಳ ದಿನಾಚರಣೆ, ಪ್ರತಿಜ್ಞೆ ಸ್ವೀಕರಿಸಿ, ಈ ಕುರಿತು ಛಾಯಾ ಚಿತ್ರಗಳು ಮತ್ತು ವೀಡಿಯೊ ಕ್ಲಿಪ್ಪಿಂಗ್‌ಗಳ ಜೊತೆಗೆ ಆಯೋಗಕ್ಕೆ ಹಾಗೂ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ವರದಿಯನ್ನು ಸಲ್ಲಿಸಬೇಕು ಎಂದು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ತಾಲೂಕ ವರದಿಗಾರರು:ಮಾಲತೇಶ್.ಶೆಟ್ಟರ್ ಹೊಸಪೇಟೆ