ಧರ್ಮಸ್ಥಳ ಚಲೋ! ಕ್ಷೇತ್ರದಿಂದ ಸಹಸ್ರಾರು ಕಾರ್ಯಕರ್ತರು ಭಾಗಿ – ಸಂಜು.ಬಾಗೇವಾಡಿ.
ಮುದ್ದೇಬಿಹಾಳ ಆ.31

ಹಿಂದುಗಳ ಪವಿತ್ರ ಯಾತ್ರಾ ಸ್ಥಳವಾದ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ವಿರೋಧಿಸಿ ಸೆ. 1 ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಯಾತ್ರೆ ನಡೆಸಲಾಗುತ್ತಿದೆ ಮುದ್ದೇಬಿಹಾಳ ಕ್ಷೇತ್ರದಿಂದ ಸುಮಾರು 20 ಕ್ಕೂ ಹೆಚ್ಚು ವಾಹನಗಳಲ್ಲಿ ಸಹಸ್ರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಎಂದು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸಂಜು ಬಾಗೇವಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಧರ್ಮದ ಉಳಿವಿಗಾಗಿ ಸೆಪ್ಟಂಬರ್ 1 ರಂದು ಧರ್ಮಸ್ಥಳ ಚಲೋ ನಡೆಸಿ ಬೃಹತ್ ಸಮಾವೇಶ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ. ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ನಿರ್ಧರಿಸಿದೆ, ಸರ್ಕಾರದಿಂದ ಭಕ್ತರ ಭಾವನೆಗಳಿಗೆ ಧಕ್ಕೆಯಾಗಿದೆ, ಧರ್ಮಸ್ಥಳದ ಸುತ್ತಮುತ್ತಲಿನ ಅಸಹಜ ಸಾವಿನ ಪ್ರಕರಣಗಳ ತನಿಖೆಯನ್ನು ಎಸ್ಐಟಿ ಬದಲಿಗೆ ಎನ್.ಐ.ಎಗೆ ವಹಿಸಿ ಎಂದು ಆಗ್ರಿಸಿದರು. ಮಾಜಿ ಶಾಸಕರಾದ ಎ.ಎಸ್ ಪಾಟೀಲ್ ನಡಹಳ್ಳಿ. ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಬಸವರಾಜ.ಸಂಕನಾಳ.ಮುದ್ದೇಬಿಹಾಳ