ಕಾಂಗ್ರೇಸ್ ಪಕ್ಷವನ್ನು ಸದೃಢವಾಗಿ ಸಂಘಟಿಸುತ್ತೇನೆ — ಪ್ರಕಾಶ್ ವರ್ಮಾ.
ತರೀಕೆರೆ ಜೂನ್.21

ಶಾಸಕರಾದ ಜಿ ಎಚ್ ಶ್ರೀನಿವಾಸ್ ಹಾಗೂ ಜಿಲ್ಲಾಧ್ಯಕ್ಷರಾದ ಡಾ.ಅಂಶುಮಂತ್ ರವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಯು ಫಾರೂಕ್ ರವರು ನನ್ನನ್ನು ನೂತನವಾಗಿ ಕಾಂಗ್ರೆಸ್ ಪಕ್ಷದ ನಗರ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ ಎಂದು ಪ್ರಕಾಶ್ ವರ್ಮಾ ಇಂದು ಪಕ್ಷದ ಕಚೇರಿಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಹೇಳಿದರು. ನಾನು ನಗರದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಸಂಘಟಿಸುತ್ತೇನೆ ಈ ಹಿಂದೆ ಎರಡು ಬಾರಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಬ್ಲಾಕ್ ಕಾಂಗ್ರೆಸ್ ಕಿಸಾನ್ ಸೆಲ್ ಅಧ್ಯಕ್ಷರಾಗಿ, ಮತ್ತು ಪುರಸಭಾ ಅಧ್ಯಕ್ಷರಾಗಿ, ಸದಸ್ಯರಾಗಿ, ಮತ್ತು ಸಹಕಾರಿ ಸಂಘಗಳ ಅಧ್ಯಕ್ಷರಾಗಿ ನಿರ್ದರ್ಶಕರಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿರುವುದರಿಂದ ಪಕ್ಷವು ನನ್ನನ್ನು ಗುರುತಿಸಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಯು ಫಾರೂಕ್, ಪುರಸಭಾ ಅಧ್ಯಕ್ಷರಾದ ಕಮಲಾ ರಾಜೇಂದ್ರ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕುಮಾರಪ್ಪ, ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ದಾದಾಪೀರ್, ರಂಗನಾಥ, ಟಿ ಜಿ ಅಶೋಕ್ ಕುಮಾರ್, ಎಂ ನಾಗರಾಜ್ ಮಾಜಿ ಸದಸ್ಯರಾದ ಟಿ ವಿ ಕೃಷ್ಣ, ಆದಿಲ್ ಪಾಷಾ, ಧರ್ಮರಾಜ್ , ಮುಖಂಡರಾದ ಟಿ ವಿ ಗಿರಿರಾಜ್, ಟಿ ಎನ್ ಜಗದೀಶ್, ಪ್ರಚಾರ ಸಮಿತಿ ಅಧ್ಯಕ್ಷರಾದ ಪರಶುರಾಮ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಂಕರ್ ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ