ಜೂ.27 ರಂದು ಉದ್ಯೋಗ ಮೇಳ.
ವಿಜಯಪುರ ಜೂನ್.22

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ವತಿಯಿಂದ ದಿನಾಂಕ 27-06-2023 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 4.00 ಗಂಟೆಯ ವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುರುದತ್ತ ಮಂಗಲ ಕಾರ್ಯಾಲಯ ಎದುರಿಗೆ, ಸ್ಟೇಶನ್ ರಸ್ತೆ ವಿಜಯಪುರದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ. ಪಿ.ಯು.ಸಿ, ಐ.ಟಿ.ಐ. ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು. ಈ ಮೇಳದಲ್ಲಿ ಪ್ರತಿಷ್ಠಿತ ಸ್ಥಳಿಯ ಕಂಪನಿಗಳು ಭಾಗವಹಿಸುತ್ತಿವೆ. ಈ ಉದ್ಯೋಗಾವಕಾಶವು ಉಚಿತವಾಗಿದ್ದು, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕಛೇರಿಯನ್ನು ಖುದ್ದಾಗಿ ಅಥವಾ ದೂರವಾಣಿ 9945000793 ಹಾಗೂ 9071055557 ಮೂಲಕ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.