ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರ ಅಂತರ್ ರಾಷ್ಟ್ರಮಟ್ಟದ ಸ್ಥಾನ ಗಳಿಸಿರಿ — ಜಿ.ಎಚ್.ಶ್ರೀನಿವಾಸ್
ತರೀಕೆರೆ ಜೂನ್.29
ವಿದ್ಯಾರ್ಥಿಗಳು ಎಲ್ಲಾ ರಂಗಗಳಲ್ಲಿ ಇರಬೇಕು ಎಂದು ಶಾಸಕರಾದ ಜಿಎಚ್ ಶ್ರೀನಿವಾಸ್ ರವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕುವೆಂಪು ವಿಶ್ವವಿದ್ಯಾನಿಲಯ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಕುವೆಂಪು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಪುರುಷರ ಹಾಗೂ ಮಹಿಳೆಯರ ಪವರ್ ವೇಟ್ ಲಿಫ್ಟಿಂಗ್ ಸ್ಪರ್ಧೆಗಳನ್ನು ಟೇಪ್ ಕಟ್ ಮಾಡಿ, ವೇಟ್ ಲಿಫ್ಟಿಂಗ್ ಮಾಡಿ ಉದ್ಘಾಟನೆ ಮಾಡಿ ಮಾತನಾಡಿದರು.
ವಿದ್ಯಾರ್ಥಿಗಳು ಕ್ರೀಡೆ ಜೊತೆಗೆ ಓದಿನ ಕಡೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲರೂ ಸಹ ಪ್ರತಿಭಾ ಪುರಸ್ಕಾರಕ್ಕೆ ಪಾತ್ರರಾಗಬೇಕು. ಪವರ್ ಲಿಫ್ಟಿಂಗ್, ವೇಟ್ ಲಿಫ್ಟಿಂಗ್ ಕ್ರೀಡೆಗಳಲ್ಲಿ ವಿಶೇಷವಾಗಿ ಮಹಿಳೆಯರು ರಾಜ್ಯ, ರಾಷ್ಟ್ರ, ಅಂತರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಮಂಜುನಾಥ್ ಟಿ ಮಾತನಾಡಿ ಕ್ರೀಡೆಗಳಿಂದ ಪ್ರೀತಿ, ವಿಶ್ವಾಸ,ನಂಬಿಕೆ, ಹೆಚ್ಚಾಗುತ್ತದೆ.
ಜ್ಞಾಪಕ ಶಕ್ತಿಯು ಹೆಚ್ಚಾಗುತ್ತದೆ. ಮಾನಸಿಕವಾಗಿ ದೈಹಿಕವಾಗಿ ಕ್ರೀಡಾಪಟುಗಳು ಸದೃಢರಾಗಿರುತ್ತಾರೆ ಎಂದು ಹೇಳಿದರು. ಕಾಲೇಜಿಗೆ ಬೇಕಾಗಿರುವ ಕಾಂಪೌಂಡು ಮತ್ತು ಇತರೆ ಬೇಡಿಕೆಗಳನ್ನು ಈಡೇರಿಸಲು ಮನವಿ ಪತ್ರ ವನ್ನು ಶಾಸಕರಿಗೆ ನೀಡಿದರು.
ಮನವಿಗೆ ಸ್ಪಂದಿಸಿದ ಶಾಸಕರು ಕಾಲೇಜಿಗೆ ಸಂಬಂಧಪಟ್ಟ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಡಾ. ಎನ್ ಡಿ ವಿರೂಪಾಕ್ಷ, ಪುರಸಭಾ ಅಧ್ಯಕ್ಷರಾದ ಕಮಲಾ ರಾಜೇಂದ್ರ ಉಪಾಧ್ಯಕ್ಷರಾದ ರಿಹಾನ ಪರ್ವೀನ್, ಮತ್ತು ಕ್ರೀಡಾ ಸಂಯೋಜಕರಾದ ವಸಂತ್ ಕುಮಾರ್ ರವರು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ