ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಅನನ್ಯ — ಶ್ಯಾಮ್ ರಾಜ್ ಟಿ.
ಕೊಟ್ಟೂರು ಜುಲೈ.2
ಕೊಟ್ಟೂರು ಪಟ್ಟಣದ ಕ್ರಿಯೇಟಿವ್ ಲೇಡಿಸ್ ಅಸೋಸಿಯೇಷನ್ ರವರ ವತಿಯಿಂದ ಶನಿವಾರ ರಂದು ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನ ಕ್ರಿಯಾ ಯೋಜನೆಯಂತೆ ಮೊದಲ ಜಾಗೃತಿ ಕಾರ್ಯಕ್ರಮವನ್ನು ಶ್ರೀ ಶ್ಯಾಮ್ ರಾಜ್ ಟಿ. ಉಪನ್ಯಾಸಕರು ಭಾಗೀರಥಿ ಪದವಿ ಪೂರ್ವ ಕಾಲೇಜು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸ್ವಸ್ತ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಅನನ್ಯ, ಈಗಿನ ಯುವ ಪೀಳಿಗೆ ಮಾಧ್ಯಮದ ದುರ್ಬಳಕೆಯನ್ನು ಮಾಡಿಕೊಳ್ಳುತ್ತಿದ್ದಾರೆ ಅದರ ಬದಲಾಗಿ ಉತ್ತಮ ಕಾರ್ಯಗಳಿಗೆ ಸದುಪಯೋಗ ಪಡಿಸಿಕೊಂಡಿದ್ದೇ ಆದರೆ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ, ಹಾಗೆಯೇ ಹದಿಹರೆಯದ ವಯಸ್ಸಿನಲ್ಲಿ ಅನೇಕ ಬದಲಾವಣೆಗಳನ್ನು ಕಾಣುತ್ತೇವೆ.

ಈ ಒಂದು ಹಂತದಲ್ಲಿ ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡು ನಿಮ್ಮ ಮೌಲ್ಯಯುತ ಜೀವನ ರೂಪಿಸಿಕೊಳ್ಳಬಹುದು ಎಂದು ತಮ್ಮ ಉದ್ಘಾಟನಾ ನುಡಿಗಳನ್ನಾಡಿದರು. ಪ್ರಸ್ತಾವಿಕವಾಗಿ ಶ್ರೀಮತಿ ನಿರ್ಮಲ ಶಿವನಗುತ್ತಿ ಪ್ರಧಾನ ಕಾರ್ಯದರ್ಶಿಗಳು ಕ್ರಿಯೇಟಿವ್ ಲೇಡೀಸ್ ಅಸೋಸಿಯೇಷನ್ ಇವರು ಕಳೆದ 23 ವರ್ಷಗಳಿಂದ ಸಮಾಜಮುಖಿ ಕೆಲಸ ಮಾಡುತ್ತಾ ಬಂದಿದ್ದು ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ದ್ವನಿ ಎತ್ತಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ನಮ್ಮ ಸಂಸ್ಥೆ ಕಾರ್ಯ ನಿರ್ವಹಿಸುತ್ತಾ ಬಂದಿದೆ, ಇದರ ಅಂಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಇಂದಿನ ಮಕ್ಕಳಲ್ಲಿ ನೈತಿಕ ಶಿಕ್ಷಣದ ಕೊರತೆ ಇದೆ ಅದನ್ನು ನೀಡುವ ಮೂಲಕ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಾಯಕವಾಗುತ್ತದೆ. ಎಂದು ತಮ್ಮ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಬಸವರಾಜ ಮುಖ್ಯಗುರುಗಳು ಇವರು ವಹಿಸಿದ್ದರು ಕಾರ್ಯಕ್ರಮ ವನ್ನು ಉದ್ದೇಶಿಸಿ ಶ್ರೀಮತಿ ಡಾ. ಅನುಪಮ ಸದಸ್ಯರು ಕ್ರಿಯೇಟಿವ್ ಲೇಡಿಸ್ ಅಸೋಸಿಯೇಷನ್ ಇವರು ವಿದ್ಯಾರ್ಥಿನಿಯರಲ್ಲಿ ಆಗುವ ದೈಹಿಕ ಬದಲಾವಣೆ ಬಗ್ಗೆ ಮಾಹಿತಿ ನೀಡುವ ಮೂಲಕ ಶುಚಿತ್ವದ ಅರಿವನ್ನು ಮೂಡಿಸಿದರು.ಕಾರ್ಯಕ್ರಮದಲ್ಲಿ ಕ್ಲಬ್ ನ ಸರ್ವ ಸದಸ್ಯರು, ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತಿ ಇದ್ದರು.
ತಾಲೂಕ ವರದಿಗಾರರು:ಪ್ರದೀಪ್. ಕುಮಾರ್. ಸಿ ಕೊಟ್ಟೂರು