ಹಣಕ್ಕಿಂತ ಮನುಷ್ಯನಿಗೆ ಆರೋಗ್ಯವೇ ಮುಖ್ಯ – ಮಹಾಂತೇಶ್. ಕೋಟಿ.
ಸೂಳೇಭಾವಿ ಫೆಬ್ರುವರಿ.2

ಮನುಷ್ಯನ ಆರೋಗ್ಯದ ಮುಂದೆ ಆಸ್ತಿ, ಹಣ ಯಾವುದು ಲೆಕ್ಕಕ್ಕೆ ಬರುವುದಿಲ್ಲ ಹೀಗಾಗಿ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಿ ಎಂದು ಸಹಾಯಕ ನಿರ್ದೇಶಕ (ಗ್ರಾ) ಮಹಾಂತೇಶ್ ಕೋಟಿ ತಿಳಿಸಿದರು.ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ದಿವಸ ಆಚರಣೆ ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾದ ಅಗತ್ಯತೆ ಹೆಚ್ಚಿದೆ. ಹಣದ ಹಿಂದೆ ಮನುಷ್ಯ ತನ್ನ ಆರೋಗ್ಯದ ನಿರ್ಲಕ್ಷ್ಯ ವಹಿಸಿ ಅದೇ ದುಡಿದ ಹಣವನ್ನು ಆರೋಗ್ಯಕ್ಕೆ ಖರ್ಚು ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಹಣ, ಆಸ್ತಿಗಿಂತ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ತಿಳಿಸಿದರು.ಬಳಿಕ ಮಾತನಾಡಿದ ಕೆಎಚ್ ಪಿಟಿ ಸಂಯೋಜಕ ನಾಗರಾಜ್ ವಡ್ಡರಕಲ್ಲ, ಪ್ರತಿ ಗ್ರಾಮಗಳಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗುತ್ತಿದ್ದು, ಗ್ರಾಮ ಪಂಚಾಯಿತಿ ಮೂಲಕ ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಆರೋಗ್ಯ ತಪಾಸಣೆ ನಾವು ಕೈಗೊಳ್ಳುತ್ತೇವೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಸಂಗಣ್ಣ ಕಳೋಳ್ಳಿ, ತಾಪಂ ಐಇಸಿ ಸಂಯೋಜಕ ಬಸವರಾಜ ಕೊಪ್ಪದ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿಡಪ್ಪ ಕುರಿ, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಎಸ್ ಡಿ ಗೌಡರ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಚ್. ಎನ್. ಮಾಗಿ, ಬಿಲ್ ಕಲೆಕ್ಟರ್ ವಾಯ್ ಎಚ್ ಕೋರಿ, ಗ್ರಾಮ ಪಂಚಾಯಿತಿ ಸರ್ವ ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಶಿಕ್ಷಕ ವರ್ಗ, ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.

