ಜುಲೈ.30 ರಂದು ಹುನಗುಂದದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಸನ್ಮಾನ.
ಹುನಗುಂದ ಜುಲೈ.29

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕ ಘಟಕ ಹುನಗುಂದ ಮತ್ತು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಜು.೩೦ ರಂದು ರವಿವಾರ ಬೆಳಗ್ಗೆ ೧೦ ಗಂಟೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು ಹಣ್ಣು ವಿತರಿಸುವ ಮೂಲಕ ಸರಳವಾಗಿ ಪತ್ರಿಕಾ ದಿನಾಚರಣೆ ಮತ್ತು ಸನ್ಮಾನ ಸಮಾರಂಭ ಜರುಗಲಿದೆ.ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಮತ್ತು ಕಾನಿಪ ನೂತನ ಅಧ್ಯಕ್ಷ ಮಹಾಂತೇಶ ಪಾಟೀಲ ಅವರ ನೇತೃತ್ವದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಓರ್ವ ವೈದ್ಯರನ್ನು ಮತ್ತು ಸತತವಾಗಿ ಅಂಬ್ಯುಲೆನ್ಸ್ ಸೇವೆಗೈದ ಡ್ರಾವರ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಗುವುದು ಮತ್ತು ಪತ್ರಿಕಾ ವಿತರಕರಿಗೆ ನೋಟ್ ಬುಕ್ ವಿತರಣೆ ಕಾರ್ಯಕ್ರಮ ಜರುಗಲಿದೆ ಎಂದು ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಹೊಸಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. .
ತಾಲೂಕ ವರದಿಗಾರರು: ಮಲ್ಲಿಕಾರ್ಜುನ.ಎಂ. ಬಂಡರಗಲ್ಲ