ಗೋಪಾಲ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಲತಾ ಪಾಲಯ್ಯ.
ತರೀಕೆರೆ ಜುಲೈ.31

ಗೋಪಾಲ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಬಿಜೆಪಿಯಿಂದ ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿದಿದೆ ಎಂದು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ರವಿ ಕಿಶೋರ್ ರವರು ಇಂದು ನೂತನವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಲತಾ ಪಾಲಯ್ಯ ಹಾಗೂ ಉಪಾಧ್ಯಕ್ಷರಾದ ಕವಿತಾ ರಂಗನಾಥ್ ರವರ ಆಯ್ಕೆ ನಂತರದ ಅಭಿನಂದನಾ ಸಮಾರಂಭದಲ್ಲಿ ಹೇಳಿದರು. ಎಲ್ಲರೂ ಪಕ್ಷಭೇದ ಮರೆತು ಪಂಚಾಯಿತಿ ಅಭಿವೃದ್ಧಿಗೆ ಕೆಲಸ ಮಾಡಿರಿ ಎಂದರು.
ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರು, ಕೆಪಿಸಿಸಿ ಸದಸ್ಯರಾದ ಎಚ್ ವಿಶ್ವನಾಥ್ ರವರು ಮಾತನಾಡಿ ಗೋಪಾಲ ಪಂಚಾಯಿತಿ ಗುಡ್ಡಗಾಡು ಪ್ರದೇಶವಾಗಿದ್ದು ಎಲ್ಲರೂ ಸೇರಿ ಒಳ್ಳೆಯ ಕೆಲಸ ಮಾಡಿರಿ,ಶಾಸಕರ ಸಹಕಾರ ಪಡೆದು ಹೆಚ್ಚಿನ ಅನುದಾನ ತೆಗೆದುಕೊಂಡು ಗ್ರಾಮ ಪಂಚಾಯಿತಿ ನೂತನ ಕಟ್ಟಡ ನಿರ್ಮಾಣ ಮಾಡಿರಿ ಎಂದು ಹೇಳಿದರು.
ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಕೆಂಪಣ್ಣ ಮಾತನಾಡಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಎಲ್ಲರೂ ಒಟ್ಟಾಗಿ ಅಭಿವೃದ್ಧಿ ಕೆಲಸ ಮಾಡಿ ನಿಮ್ಮ ಜವಾಬ್ದಾರಿ ನಿರ್ವಹಿಸಿರಿ ಎಂದು ಹೇಳಿದರು. ನೂತನ ಅಧ್ಯಕ್ಷರಾದ ಲತಾ ಪಾಲಯ್ಯ ಮಾತನಾಡಿ ಎಲ್ಲರ ಸಹಕಾರದಿಂದ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಿಗೂ ಸಹ ತಾರತಮ್ಯ ಮಾಡದೆ ಅಭಿವೃದ್ಧಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಉಪಾಧ್ಯಕ್ಷರಾದ ಕವಿತಾ ರಂಗನಾಥ್ ರವರು ಮಾತನಾಡಿ ಆಯ್ಕೆಯಾಗಲು ಸಹಕರಿಸಿದ ಎಲ್ಲಾ ಸದಸ್ಯರಿಗೂ ಸಹ ಅಭಿನಂದನೆ ತಿಳಿಸಿದರು. ಚುನಾವಣಾ ಅಧಿಕಾರಿಯಾಗಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶಿವರಾಜ್ ಕುಮಾರ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಪ್ರಭಾರಿ ಪಿಡಿಒ ಪಾಂಡುರಂಗ ರವರು ಸ್ವಾಗತಿಸಿ ವಂದಿಸಿದರು.
ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ