ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ SC/ST ಸಮುದಾಯಗಳಿಗೆ ಮೀಸಲು ಇರುವ 11ಸಾವಿರ ಕೋಟಿ ಅನುದಾನವನ್ನು ಬಳಕೆ ಮಾಡದೇ ಸಮುದಾಯದ ಅಭಿವೃದ್ಧಿಗೆ ಬಳಸಲು — ಡಿ.ವ್ಹಿ.ಪಿ ಆಗ್ರಹ.
ಇಂಡಿ ಆಗಷ್ಟ. 2

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಾ ದಲಿತ ವಿದ್ಯಾರ್ಥಿ ಪರಿಷತ್ ಘಟಕದಿಂದ ಇಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಅಭಿವೃದ್ಧಿಗೆ ಬಳಕೆ ಆಗಬೇಕಿದ್ದ ಈ ಸಾಲಿನ ಅನುದಾನದಲ್ಲಿನ 11 ಸಾವಿರ ಕೋಟಿ ರೂಪಾಯಿ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗೆ ಬಳಸುತ್ತಿರುವುದನ್ನು ದಲಿತ ವಿದ್ಯಾರ್ಥಿ ಪರಿಷತ್ ವಿರೋಧಿಸುತ್ತದೆ. ಕೂಡಲೇ ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು. SC/ST ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಮೀಸಲಿರಬೇಕಾಗಿದ್ದ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗಾಗಿ ಬಳಸುತ್ತಿರುವುದನ್ನು ಖಂಡನೀಯ.

ಶೋಷಿತ ಸಮುದಾಯಗಳ ಹಕ್ಕು ಕಿತ್ತುಕೊಂಡು, ತಮ್ಮ ಘೋಷಣೆ ಯೋಜನೆಗಳಿಗಾಗಿ ನಮ್ಮ ಹಣಬಳಸದೆ ಈ ಸಮುದಾಯಗಳ ವಿದ್ಯಾರ್ಥಿ ಯುವಜನರ ಹಾಗೂ ನಿರುದ್ಯೋಗ ಯುವಕರ, ಮಹಿಳೆಯರ ಮಕ್ಕಳ, ರೈತ ಕೂಲಿ ಕಾರ್ಮಿಕರ, ಒಟ್ಟಾರೆ ಈ SC /ST ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಅನುದಾನ ಮೀಸಲಿಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಮಾನ್ಯ ತಹಶೀಲ್ದಾರ್ ಸಾಹೇಬರು ಇಂಡಿ ಇವರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಇವರಿಗೆ ಮನವಿಯನ್ನು ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಡಿ.ವ್ಹಿ.ಪಿ ತಾಲೂಕಾ ಅಧ್ಯಕ್ಷರಾದ ವಿನೋದ ಕಾಳೆ.ಆಕಾಶ ಹಾದಿಮನಿ.ರವಿ ಸಿಂಗೆ.ಗಂಗಾಧರ ಕಾಳೆ.ರಾಹುಲ ಮನಗೂಳಿ .ಸಂತೋಷ ತಳಕೇರಿ.ಪ್ರವೀಣ ಕಾಂಬಳೆ .ವಿನಾಯಕ ಕಾಳೆ.ರಾಮ ಪೋತೆ.ಪ್ರಕಾಶ ರಾಠೋಡ.ಮರೆಪ್ಪ ಹರಿಜನ.ಇತರರು ಭಾಗವಹಿಸಿದರು.
ತಾಲೂಕ ವರದಿಗಾರರು:ಶಿವಪ್ಪ.ಬಿ.ಹರಿಜನ.ಇಂಡಿ