ಅಕ್ರಮ ಮದ್ಯ ಮಾರಾಟ-ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ!.
ಕೊಟ್ಟೂರು ಸಪ್ಟೆಂಬರ್.10

ತಾಲೂಕಿನಲ್ಲಿ ನಿರಂತರವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ, ಅಬಕಾರಿ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಎಲ್ಲೊ ಕೆಲವು ಕಡೆ ದಾಳಿ ಮಾಡಿದಂತೆ ಪ್ರಚಾರ ಗಿಟ್ಟಿಸಿಕೊಂಡು ಇತರರಿಗೆ ಎಚ್ಚರಿಕೆ ಕೊಡುವ,ಮೂಲಕ ವಸೂಲಿಯಲ್ಲಿ ನಿರತವಾದ ಬಗ್ಗೆ ವ್ಯಾಪಾಕ ಚರ್ಚೆಗೆ ಸಾರ್ವಜನಿಕರಲ್ಲಿ ಭಾಸವಾದಂತೆ ಗ್ರಾಸವಾಗಿದೆ.!ತಾಲೂಕಿನಾದ್ಯಂತ ಸತತ ಮಳೆಯ ಇಲ್ಲದೆ ದುಡಿಯುವ ಕೈಗಳಿಗೆ ಕೆಲಸ ಇಲ್ಲವಾಗಿದೆ. ರೈತರು ಬೆಳೆದ ಬೆಳೆ ಹಾಳು ಮತ್ತು ಜನರು ಆರ್ಥಿಕ ಸಂಕಷ್ಟದಲ್ಲಿದ್ದರೂ ಗ್ರಾಮೀಣ ಭಾಗದ ಕೆಲವರು ಗ್ರಾಮದಲ್ಲಿಯೇ ಸುಲಭವಾಗಿ ಸಿಗುವ ಮದ್ಯ ಸೇವನೆ ಇಂದ ಇದರ ಚಟಕ್ಕೆ ಬಿದ್ದಿದ್ದಾರೆ. ಇದರಿಂದ ಮತ್ತಷ್ಟು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ.ಪಟ್ಟಣದಲ್ಲಿ ಕೆಲವು , ಸಣ್ಣಪುಟ್ಟ ಮಾಂಸಾಹಾರಿ ಹೋಟೆಲ್‌ಗಳು, ಕೆಲವರು ಅಂಗಡಿಗಳೂ ಸಹ ಮದ್ಯ ಮಾರಾಟ ಕೇಂದ್ರವಾಗಿ ಮಾರ್ಪಟ್ಟಿದೆ. ಕೆಲವರು ಇದನ್ನು ನಕಲಿ ಮದ್ಯ ಎನ್ನುತ್ತಿದ್ದರೂ ಈ ಬಗ್ಗೆ ಖಚಿತ ಮಾಹಿತಿ ಇಲ್ಲ.? ನಗರ, ಪಟ್ಟಣದ ವೈನ್‌ಶಾಪ್‌ಗಳಿಂದ ಖರೀದಿಸಿ 10-20 ರೂ. ಹೆಚ್ಚುವರಿ ದರ ವಿಧಿಸಿ ಮಾರಾಟ ಸಹ ಮಾಡುತ್ತಾರೆ. ಈ ಬಗ್ಗೆ ಪಟ್ಟಣ ಮತ್ತು ಗ್ರಾಮೀಣ ಭಾಗದಲ್ಲಿ ಕಠಿಣ ಕ್ರಮ ವಹಿಸದ ಪೊಲೀಸ್ ಇಲಾಖೆ ಆಗಾಗ ದಾಳಿ ನಡೆಸಿ ಪ್ರಕರಣ ದಾಖಲಿಸಿದರೂ ಅಕ್ರಮ ಮದ್ಯ ಮಾರಾಟಕ್ಕೆ ಕೊನೆ ಇಲ್ಲದಂತಾಗಿದೆ.ಎಂಬುದು ಗ್ರಾಮೀಣ ಭಾಗದ ಮಹಿಳೆಯರ ಅಳಲು.ಅಕ್ರಮ ಮದ್ಯೆ ದಂಧೆ ಎಗ್ಗಿಲ್ಲದೇ ಸಾಗಿದೆ , ಕೊಟ್ಟೂರು ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಎಂದು ಆಯಾ ಭಾಗದ ಸಾರ್ವಜನಿಕರು ದೂರುತ್ತಾರೆ.ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಗ್ರಾಮಸ್ಥರ ಒತ್ತಾಯ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದರೂ ಈ ಕುರಿತು ಅಬಕಾರಿ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತು ಒಂದೆರಡು ಪ್ರಕರಣವು ದಾಖಲಿಸಿ ಕೈ ಚೆಲ್ಲುತ್ತಿದ್ದಾರೆ. ಈ ಬಗ್ಗೆ ಸೂಕ್ತವಾದ ತನಿಖೆ ಕೈಗೊಂಡು ಇದು ಎಲ್ಲಿಂದ ಸರಬರಾಜು ಆಗುತ್ತಿದೆ, ಮದ್ಯದ ಪೌಚ್‌ಗಳಲ್ಲಿ ಇರುವ ನಂಬರ್ ರಿಂದ ಇದು ಎಲ್ಲಿಂದ ಸರಬರಾಜಾಗಿತ್ತು. ಎಂಬುದನ್ನು ನಿಖರವಾಗಿ ತಿಳಿಯುವ ಸಾಧ್ಯತೆ ಇದ್ದರೂ ಈ ಕೆಲಸ ನಡೆಯುತ್ತಿಲ್ಲ. ಅಕ್ರಮ ಮಧ್ಯಕೋರರಿಗೆ ಸಾತ್ ನೀಡುತ್ತಿರುವ ಅಧಿಕಾರಿಗಳು..?ಇದರಿಂದ ಗ್ರಾಮೀಣ ಭಾಗದಲ್ಲಿ ಕುಡುಕರು ಹೆಚ್ಚಾಗಲು ಇಲಾಖೆಯವರೇ ಕಾರಣವಾಗಿದ್ದಾರೆ. ಅಬಕಾರಿ ಇಲಾಖೆ ತಮ್ಮ ಜವಾಬ್ದಾರಿ ಅರಿತು ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಪರಶುರಾಮ್ ,ನೂರ್ ಮುಹಮ್ಮದ್, ಕೊಟ್ರೇಶ್,ಗ್ರಾಮಸ್ಥರ ಆಗ್ರಹವಾಗಿದೆ.
ತಾಲೂಕ ವರದಿಗಾರರು:ಪ್ರದೀಪ್.ಕುಮಾರ್.C ಕೊಟ್ಟೂರು