ವಚನ ಸಾಹಿತ್ಯದಲ್ಲಿ ಸಮಾನತೆಗೆ ಆದ್ಯತೆ.

ಕೂಡ್ಲಿಗಿ ಆಗಷ್ಟ.27

ವಚನ ಸಾಹಿತ್ಯವು ಸಮಾಜದ ಅಸಮಾನತೆ, ಮೂಢನಂಬಿಕೆ, ಜಾತೀಯತೆಯನ್ನು ಹೋಗಲಾಡಿಸಲು ಶರಣರಿಂದ ರಚಿತವಾದದ್ದು. ಅವುಗಳಲ್ಲಿನ ಸಾರವನ್ನು ಎಲ್ಲರೂ ಅರ್ಥೈಸಿಕೊಂಡು ಜೀವನ ನಡೆಸಬೇಕಿದೆ ಎಂದು ಶರಣ ಸಾಹಿತ್ಯ ಪರಿಷತ್ ವಿಜಯನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಎಂ. ರವಿಕುಮಾರ್ ತಿಳಿಸಿದರು. ತಾಲೂಕಿನ ಎಂ ಬಿ ಅಯ್ಯನ ಹಳ್ಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆಯಲ್ಲಿ ಶರಣ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ಆಯೋಜಿಸಿದ್ದ. ವಚನ ದಿನ ಕಾರ್ಯಕ್ರಮದಲ್ಲಿ ವಚನ ಸಾಹಿತ್ಯ ಮಾನವೀಯ ಮೌಲ್ಯಗಳು ಎಂಬ ವಿಷಯದ ಕುರಿತು ಹಿರಿಯ ಪತ್ರಕರ್ತರಾದ ಹುಡೇಂ ಕೃಷ್ಣಮೂರ್ತಿ ಮಾತನಾಡಿ 12ನೇ ಶತಮಾನದ ಬಸವಾದಿ ಶರಣರು ರಚಿಸಿದ ವಚನ ಸಾಹಿತ್ಯದಲ್ಲಿ ದಯೆ. ಕರುಣೆ. ಅಹಿಂಸೆ.ಸಂಸ್ಕಾರ. ಕಾಯಕ. ದಾಸೋಹ. ಸೇರಿ ಅನೇಕ ಮಾನವೀಯ ಮೌಲ್ಯಗಳು ತುಂಬಿದೆ ಎಂದು ಸ್ವವಿವರವಾಗಿ ತಿಳಿಸಿದರು . ಕಾರ್ಯಕ್ರಮದ ಉದ್ಘಾಟಿಸಿ ಶರಣ ಸಾಹಿತ್ಯ ಪರಿಷತ್ತಿನ ವಿಜಯನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಸಾಹಿತಿಯನ್ನು ರವಿಕುಮಾರ್ ಮಾತನಾಡಿ 12ನೇ ಶತಮಾನದಲ್ಲಿ ದಯವೇ ಧರ್ಮದ ಮೂಲವಯ್ಯ ಎಂದು ಶರಣರು ಸಾರಿದ್ದಾರೆ.

ಇತ್ತೀಚಿನ ವಾತಾವರಣ ನೋಡುತ್ತಿದ್ದರೆ ಭಯವೇ ಧರ್ಮದ ಮೂಲವಯ್ಯ ಎನ್ನುವಂತಾಗಿರುವುದು ನೋವಿನ ಸಂಗತಿಯಾಗಿದೆ. ಶರಣ ಸಾಹಿತ್ಯ ಪರಿಷತ್ತು ಸ್ಥಾಪಿಸಿದ ಸುತ್ತೂರಿನ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ ಜನ್ಮದಿನದ ನಿಮಿತ್ತ ವಚನ ದಿನವನ್ನಾಗಿ ಎಲ್ಲೆಡೆ ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ನಂತರ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅರುಣ್ ಕುಮಾರ್ ಹೊಸಮನೆ ಮಾತನಾಡಿದರು. ಶರಣ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಸಾ. ಮ. ಸಂಗಮೇಶ್ವರಯ್ಯ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಈರಣ್ಣ ಮಾತನಾಡಿದರು. ಇದೇ ಸಂದರ್ಭದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ತಾಲೂಕು ಗೌರವ ಕಾರ್ಯದರ್ಶಿ ಕೆ.ಎಸ್.ವೀರೇಶ್. ಸಂಘಟನಾ ಕಾರ್ಯದರ್ಶಿ ಎಂ. ಓ ಮಂಜುನಾಥ್. ಬಯಲು ತುಂಬುರಗುದ್ದಿ ಅಜಯ್. ದಯಾನಂದ ಸಜ್ಜನ್. ಶಾಲೆಯ ಶಿಕ್ಷಕರಾದ ಬಸವೇಶ್ವರ. ತಿಮ್ಮೇಶ್. ಅಶ್ವಿನಿ. ಗಾಯಿತ್ರಿ. ಸೇರಿದಂತೆ ಶಾಲೆಯ ಸಿಬ್ಬಂದಿ ವರ್ಗದವರು. ಮತ್ತು ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸೇರಿದಂತೆ ಇತರರು ಉಪಸ್ಥಿತರಿದ್ದರು. ವಚನ ಕಂಠಪಾಠ ಗಾಯನ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಜಿಲ್ಲಾ ವರದಿಗಾರರು: ರಾಘವೇಂದ್ರ.ಸಾಲುಮನೆ. ಕೂಡ್ಲಿಗಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button