ರಕ್ಷಣೆಯ ರಕ್ಷಾ ಬಂಧನ.

ಬೆಂಗಳೂರು ಆಗಷ್ಟ.30

ಅಣ್ಣ ತಂಗಿಯ ಜೀವನದ ಒಂದು ಉತ್ತಮ ಪ್ರೀತಿಯ ಸಂಕೇತ ಒಬ್ಬರನ್ನು ಪರಸ್ಪರ ರಕ್ಷಣೆ ಮಾಡುವ ಮನಸ್ತಾಪವನ್ನು ಹೊಂದಿರುತ್ತಾರೆ. ರಕ್ಷಾ ಬಂಧನ ಪ್ರಾಚೀನ ಕಾಲದಿಂದ ಬಹಳ ಪ್ರಾಮುಖ್ಯತೆ ಹೊಂದಿದೆಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಹಬ್ಬ. ಆ ದಿನ ಪ್ರದೀಪ್ ರಾಠೋಡ್,ನೀಹಾರಿಕ ಸಹೋದರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ,ಭಾರತದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯನ್ನು ಯಜುರ್ ಉಪಕರ್ಮ ಎಂದು ಹಿಂದಿನಿಂದ ಆಚರಿಸುತ್ತಿದ್ದಾರೆ.

ಈ ದಿನಕ್ಕೆ ಮತ್ತೊಂದು ವಿಶೇಷವಿದೆ. ಮುಂಚೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚು ಪ್ರಚಲಿತವಿದ್ದ ‘ರಕ್ಷಾಬಂಧನ’ ಅಥವಾ ‘ರಾಖಿ’ ಹಬ್ಬವನ್ನು ಇತ್ತೀಚಿನ ವರ್ಷಗಳಲ್ಲಿ ಭಾರತದಾದ್ಯಂತ ಎಲ್ಲರೂ ಆಚರಿಸುತ್ತಾರೆ. ಆದರೆ ಅಣ್ಣ ತಂಗಿಯರ ಬಾಂಧವ್ಯವನ್ನು ಪ್ರತಿಯೊಬ್ಬರೂ ಭಾವನಾತ್ಮಕವಾಗಿ ಸ್ಮರಿಸುವ ಈ ದಿನ ಬಾಲ್ಯದ ಅನೇಕ ಸಿಹಿ ಕಹಿ ನೆನಪುಗಳನ್ನು ನಮ್ಮ ಮನದಲ್ಲಿ ಮೂಡಿಸುತ್ತದೆ.ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನ ಹಬ್ಬದ ನೀತಿಯಾಗಿದೆ,

ವರದಿ:ಮೌನೇಶ್ ರಾಠೋಡ್

ಬೆಂಗಳೂರು

9632493970

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button